ಧಾರವಾಡ: ಶಿಕ್ಷಕರ ನೇಮಕಕ್ಕಾಗಿ ಅರ್ಜಿ ಆಹ್ವಾನ, ವಿವರ
ಧಾರವಾಡ, ಜೂನ್ 08; ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ ವಿಶೇಷ ಸಂಪನ್ಮೂಲ ಶಿಕ್ಷಕರ ನೇರಗುತ್ತಿಗೆ ನೇಮಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಕೆ ಮಾಡಲು ಜೂನ್ 12 ಕೊನೆಯ ದಿನ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಡಿಇಡಿ, ಬಿಇಡಿ ಪ್ರಮಾಣ ಪತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಜೂನ್ 12ರಂದು ಸಂಜೆ 5ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು ಮಾರ್ಚ್ 31, 2025ರ ವರೆಗೂ ಕರ್ತವ್ಯ ನಿರ್ವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 0836270554 ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಕಚೇರಿಯನ್ನು ಸಂಪರ್ಕಿಸಬಹುದು.
ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ: ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರೆಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಜಿಲ್ಲಾ ಮಟ್ಟದಲ್ಲಿ ಬೆಂಗಳೂರಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಹಾಗೂ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೊಗದಲ್ಲಿ 60 ದಿನಗಳ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ ನೀಡುತ್ತಿದೆ.
ತರಬೇತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತರು, ನಿಗದಿತ ನಮೂನೆ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲ್ಲೂಕಾ ಕಾರ್ಯಾಲಯದಲ್ಲಿ ಪಡೆಯಬೇಕು.
ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 30 ರೊಳಗಾಗಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447201ಗೆ ಸಂಪರ್ಕಿಸಬಹುದು.
ಅತಿಥಿ ಶಿಕ್ಷಕರ ನೇಮಕಾತಿ: ಬಳ್ಳಾರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣದ ಸಂಸ್ಥೆಗಳ ಸಂಘದ ವಸತಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜೂನ್ 15 ಕೊನೆಯ ದಿನವಾಗಿದೆ.
ಕನ್ನಡ 8, ಇಂಗ್ಲೀಷ್ 7, ಹಿಂದಿ 5, ಗಣಿತ 9, ವಿಜ್ಞಾನ 7, ಸಮಾಜ ವಿಜ್ಞಾನ 2, ದೈಹಿಕ ಶಿಕ್ಷಕ 7, ಗಣಕಯಂತ್ರ ಶಿಕ್ಷಕ 7, ಒಟ್ಟು 52 ಅತಿಥಿ ಶಿಕ್ಷಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಬಿ.ಎ, ಬಿ.ಇಡಿ., ಬಿ.ಎಸ್‍ಸಿ ಬಿ.ಇಡಿ., ಟಿ.ಇ.ಟಿ., ಬಿ.ಪಿ.ಇಡಿ, ಬಿ.ಎಸ್.ಸಿ ಕಂಪ್ಯೂಟರ್, ಬಿ.ಸಿ.ಎ ಅರ್ಹತೆ ಹೊಂದಿರುವ ಶಿಕ್ಷಕರಿಂದ ಅರ್ಜಿ ಕರೆಯಲಾಗಿದೆ.
ಆಸಕ್ತ, ಅರ್ಹ ಅಭ್ಯರ್ಥಿಗಳು ಬಳ್ಳಾರಿ ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7760167576, 9844969858, 8310558003 ಸಂಪರ್ಕಿಸಬಹುದು.












Click it and Unblock the Notifications