ಬಳ್ಳಾರಿ; ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ, ಮಾರ್ಚ್ 11; ಬಳ್ಳಾರಿ ಜಿಲ್ಲೆಯಲ್ಲಿ18 ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಟಾನಕ್ಕಾಗಿ ಮತ್ತು ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಬಳ್ಳಾರಿ/ ವಿಜಯನಗರ ಜಿಲ್ಲೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಜಿಗಳನ್ನು ಸಲ್ಲಿಸುವವರು 21 ರಿಂದ 40 ವರ್ಷದೊಳಗಿರಬೇಕು. ಕೃಷಿ ಇಲಾಖೆಯಲ್ಲಿ ಖಾಲಿ ಇರುವ 8 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ Bcs agri, Bsc hoirticulture, Msc agri/ Msc horticulture ವಿದ್ಯಾರ್ಹತೆ ಹೊಂದಿರಬೇಕು. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ 7 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ Bcs agri, Bsc hoirticulture, Msc agri/ Msc horticulture ವಿದ್ಯಾರ್ಹತೆ ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಅರಣ್ಯ ಇಲಾಖೆಯ 3 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ Bcs Forestry/ Msc Forestry ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತರು ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಮಹಾತ್ಮಗಾಂಧಿ ನರೇಗಾ ಕೋಶ ವಿಭಾಗದಿಂದ ಅರ್ಜಿಗಳನ್ನು ಪಡೆದು ಮಾರ್ಚ್ 25ರೊಳಗೆ ಸಲ್ಲಿಸಬೇಕು.
ಆಯ್ಕೆಯಾದವರಿಗೆ ಮಾಸಿಕ ಸಂಭಾವನೆ 24 ಸಾವಿರ ರೂ. ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯೆ ನಂತರ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಮೆರಿಟ್ ಪಟ್ಟಿ ಮಾ.30ರಂದು ಪ್ರಕಟಿಸಲಾಗುತ್ತದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಆಂಗ್ಲ ಭಾಷೆ ತಿಳಿದಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications