ಉಡುಪಿ: 18 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಹಾಕಿ

ಉಡುಪಿ, ನವೆಂಬರ್ 26 : ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 31/12/2019 ಕೊನೆಯ ದಿನಾಂಕವಾಗಲಿದೆ.

ಒಟ್ಟು 18 ಗ್ರಾಮ ಲೆಕ್ಕಿಗ (Village accountant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2/12/2019ರಿಂದ 31/12/2019ರ ತನಕ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ. ಜಿಲ್ಲಾ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 21,400 ರಿಂದ 42,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.

Apply For 18 Village Accountant Post In Udupi

ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಸಿ ಅಥವ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡವರು ಅರ್ಜಿಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಸುವವರಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷದ ವಯೋಮಿತಿ ಸಡಿಲಿಕೆ ಇದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+