ತುಮಕೂರು; ಕೆಲಸ ಖಾಲಿ ಇದೆ, ವೇತನ 12,000 ರೂ.ಗಳು
ತುಮಕೂರು, ಫೆಬ್ರವರಿ 27; ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 14/3/2022 ಕೊನೆಯ ದಿನವಾಗಿದೆ.
ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು 12,000 ರೂ. ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ 19 ಗ್ರಾಮ ಪಂಚಾಯಿತಿಗಳ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಅಂಕಸಂದ್ರ, ಬಾಗೇನಹಳ್ಳಿ, ಬೇವಿನಹಳ್ಳಿ, ಭೈರನಾಯಕನಹಳ್ಳಿ, ಚೆನ್ನಕೇಶವಪುರ, ದಂಡಿನಶಿವರ, ಗರಣಿ, ಹುಳಿಯಾರು, ಕೆಂಕೆರೆ, ಕೊಡಗೆಹಳ್ಳಿ, ಮುದ್ದೇನಹಳ್ಳಿ (ಮಾಳಿಗೆಹಳ್ಳಿ), ನಡೆಮಾವಿನಪುರ, ನಾದೂರು, ನಲ್ಲಿಗಾನಹಳ್ಳಿ, ನಿಡವಳಲು, ನೊಣವಿನಕೆರೆ, ಸಿದ್ದಾಪುರ, ವಳ್ಳೂರು, ವಡ್ಡಗೆರೆ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35, 2ಎ/ 2ಬಿ/ 3ಎ/ 3ಬಿ 38, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯ ಜೊತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಂಕಪಟ್ಟಿ ಸಲ್ಲಿಸಬೇಕು. ಅಭ್ಯರ್ಥಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು ಮತ್ತು ತಹಶೀಲ್ದಾರ್ ಅವರಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಚುನಾವಣಾ ಗುರುತಿನ ಚೀಟಿ ಸಲ್ಲಿಸಬೇಕು. ಜಾತಿ ಪ್ರಮಾಣ ಪತ್ರವನ್ನು ತಾಲೂಕು ತಹಶೀಲ್ದಾರ್ ಅವರಿಂದ ಪಡೆದು ಸಲ್ಲಿಸಬೇಕು. ಯಾವುದೇ ಮೀಸಲಾತಿಯನ್ನು/ ಸಡಿಲಿಕೆಯನ್ನು ಒಳಪಡುವ ಅಭ್ಯರ್ಥಿಗಳು ಸಂಬಂಧಿಸಿದ ಇಲಾಖೆಯಿಂದ ದೃಢೀಕೃತ ಪ್ರಮಾಣಪತ್ರವನ್ನು ಸಲ್ಲಿಸತಕ್ಕದ್ದು.
ಕನ್ನಡ ಮಾಧ್ಯಮ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರಗಳನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದು ಸಲ್ಲಿಸತಕ್ಕದ್ದು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ.
ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ/ ಉಪ ಪ್ರೇರಕರುಗಳಿಗೆ ಆದ್ಯತೆ ನೀಡಲಾಗುತ್ತದೆ. ಪ್ರೇರಕ/ ಉಪ ಪ್ರೇರಕರು ಒಂದು ವೇಳೆ ನೇಮಕಗೊಂಡಲ್ಲಿ ಪ್ರೇರಕ/ ಉಪ ಪ್ರೇರಕ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಹಾಗೂ ಸಂಬಂಧಪಟ್ಟ ಪತ್ರವನ್ನು ಇಲಾಖೆಯಿಂದ ಪಡೆದು ಸಲ್ಲಿಸಬೇಕು.
ಅರ್ಜಿಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾರ್ಚ್ 14ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಡೆಯಬಹುದಾಗಿದೆ.
ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ tumkurzillapanchayat.gov.in ನಲ್ಲಿ ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆ 0816-2278063.
ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರವೀಣ್ ನಾಯಕ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ಇಲ್ಲಿ ಖಾಲಿ ಇರುವ ಆಡಳಿತ ಸಹಾಯಕ/ ಗುಮಾಸ್ತ-ವ-ಬೆರಳಚ್ಚುಗಾರ ಹುದ್ದೆ 1 ಮತ್ತು ದಲಾಯತ್ 1 ಹುದ್ದಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಎಡಿಆರ್ ಕಟ್ಟಡ, ಹಳೇ ನ್ಯಾಯಲಯಗಳ ಸಂಕೀರ್ಣದಲ್ಲಿರುವ ಕಚೇರಿಯನ್ನು ಸಂಪರ್ಕಿಸಬಹುದು.












Click it and Unblock the Notifications