ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ; 190 ಹುದ್ದೆಗಳು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08; ಬ್ಯಾಂಕ್ ಆಫ್ ಮಹಾರಾಷ್ಟ್ರ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 19 ಕೊನೆಯ ದಿನವಾಗಿದೆ.

ಲಾ ಅಫೀಸರ್, ಸೆಕ್ಯೂರಿಟಿ ಆಫೀಸರ್ ಸೇರಿದಂತೆ ಒಟ್ಟು 190 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 36,000-69,810 ರೂ. ವೇತನವನ್ನು ನೀಡಲಾಗುತ್ತದೆ.

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ; ಪದವೀಧರರು ಅರ್ಜಿ ಹಾಕಿ ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ; ಪದವೀಧರರು ಅರ್ಜಿ ಹಾಕಿ

ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ 100, ಲಾ ಆಫೀಸರ್ 10, ಸೆಕ್ಯುರಿಟಿ ಆಫೀಸರ್ 10, ಎಚ್‌ಆರ್/ ಪರ್ಸನಲ್ ಆಫೀಸರ್ 10, ಡಿಬಿಎ 3, ವಿಂಡೋಸ್ ಆಡ್ಮಿನಿಸ್ಟ್ರೇಟರ್ 12, ಪ್ರಾಡಕ್ಟ್ ಸಪೋರ್ಟ್ ಇಂಜಿನಿಯರ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ECIL ನೇಮಕಾತಿ 2021: 243 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ECIL ನೇಮಕಾತಿ 2021: 243 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Apply For 190 Posts At Bank Of Maharashtra

ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ ಹುದ್ದೆಗೆ ಪದವಿ, ಲಾ ಆಫೀಸರ್ ಹುದ್ದೆಗೆ ಕಾನೂನು ವಿಷಯದಲ್ಲಿ ಪದವಿ, ಸೆಕ್ಯುರಿಟಿ ಆಫೀಸರ್ ಹುದ್ದೆಗೆ ಪದವಿ, ಎಚ್‌ಆರ್/ ಪರ್ಸನಲ್ ಆಫೀಸರ್ ಹುದ್ದೆಗಳಿಗೆ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 20 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಕೆ ಮಾಡುವ ಒಬಿಸಿ ಅಭ್ಯರ್ಥಿಗಳು 1180 ರೂ. ಶುಲ್ಕ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳು 118 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವಾಗ ಗೊಂದಲಗಳಿದ್ದರೆ ಈ ವಿಳಾಸಗಳಿಗೆ ಇ-ಮೇಲ್ ಕಳಿಸಬಹುದಾಗಿದೆ.
[email protected] [email protected] , [email protected]

ಆಸಕ್ತ ಅಭ್ಯರ್ಥಿಗಳಿಗೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ bankofmaharashtra.in

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ; ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷಾ ಶಿಕ್ಷಕರ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 14ರೊಳಗೆ ಅರ್ಜಿ ಹಾಕಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ, ಬಿ.ಎಡ್ ಹಾಗೂ ಟಿಇಟಿಯಲ್ಲಿ ಉತ್ತೀರ್ಣರಾಗಿರಬೇಕು. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅಥವಾ ಬೇರೆಡೆ ಅನುಭವ ಹೊಂದಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಹಾಗೂ ಮೆರಿಟ್ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಈ ನೇಮಕಾತಿ ಸಂಪೂರ್ಣ ತಾತ್ಕಾಲಿಕವಾಗಿದೆ. ಅಭ್ಯರ್ಥಿಗಳು ಸೆಪ್ಟೆಂಬರ್ 14 ರೊಳಗೆ ಅರ್ಹತೆಯ ಅಂಕಪಟ್ಟಿ ಹಾಗೂ ಬಯೋಡೇಟಾವನ್ನು ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.

ಈ ಹುದ್ದೆಯನ್ನು ಮುಂದುವರಿಸುವ ಹಾಗೂ ರದ್ದುಪಡಿಸುವ ಹಕ್ಕನ್ನು ಕೊಪ್ಪಳದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕಾಯ್ದಿರಿಸಿಕೊಂಡಿರುತ್ತಾರೆ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಲಿಂಗನಬಂಡಿಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ; ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗೌರವ ಸಂಭಾವನೆ ಆಧಾರಿತವಾಗಿ ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯ, 714, ನೆಲ ಮಹಡಿ, 5ನೇ ಮುಖ್ಯ ರಸ್ತೆ, 10ನೇ ಕ್ರಾಸ್, ಎಂ.ಸಿ ಲೇಔಟ್, ವಿಜಯನಗರ, ಬೆಂಗಳೂರು-560040 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-23352460.

English summary
Bank of Maharashtra invited applications to fill up law officer, security officer and other post. Candidates can apply till September 19, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X