ಬಾಗಲಕೋಟೆ; 23 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಹಾಕಿ
ಬಾಗಲಕೋಟೆ, ಅಕ್ಟೋಬರ್ 05; ಬಾಗಲಕೋಟೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಕೆ ಮಾಡಲು 19/10/2023 ಕೊನೆಯ ದಿನವಾಗಿದೆ.
ಒಟ್ಟು 23 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಸೇವಾ ನಿಯಮಗಳು) ನಿಯಮಗಳನ್ವಯ 8 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಾಗಿರಬೇಕು. ಅರ್ಜಿ ಸಲ್ಲಿಕೆ ಮಾಡುವಾಗ ಅಭ್ಯರ್ಥಿಗಳು ಕಡ್ಡಾಯವಾಗಿ ತಹಶೀಲ್ದಾರ್‌ರಿಂದ ವಾಸಸ್ಥಳ ದೃಢೀಕರಣ ಪತ್ರವನ್ನು ಪಡೆದು ಅಪ್‌ಲೋಡ್ ಮಾಡಬೇಕಿದೆ.
ವಿದ್ಯಾರ್ಹತೆಯ ವಿವರಗಳು; ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಲೇಬೇಕು. ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೇ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಕೆ ಮಾಡುವವರು ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ)ಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿದಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿಗಳಿಸಿದ ಗರಿಷ್ಠ ಅಂಕಗಳು/ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಹತೆಯ ದಾಖಲಾತಿಗಳ ನೈಜತೆ ಬಗ್ಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ದೃಢಪಡಿಸಿಕೊಂಡ ನಂತರ ನೇಮಕಾತಿಗೆ ಪರಿಗಣಿಸಲಾಗುವುದು.
ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಸಾಮಾನ್ಯ ಅರ್ಹತ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮ 1977ರಲ್ಲಿ ನಿರ್ದಿಷ್ಟಪಡಿಸಿರುವಂತೆ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಲಾಗುವುದು. ಮಾಜಿ ಸೈನಿಕನಾಗಿದ್ದಲ್ಲಿ ಸೇವೆ ಸಲ್ಲಿರುವನ್ನು ವರ್ಷಗಳಿಗೆ 03 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು.
ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳು. ವಿಧವೆಯಾಗಿದ್ದಲ್ಲಿ (ಅಭ್ಯರ್ಥಿಯು ಸಕ್ಷಮ ಪ್ರಾಧಿಕಾರದಿಂದ ತಾನು ವಿಧವೆಯೆಂದು ಹಾಗೂ ಮರು ಮದುವೆಯಾಗಿಲ್ಲವೆಂದು ಪ್ರಮಾಣ ಪತ್ರ) ಸಲ್ಲಿಸಿದಲ್ಲಿ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಿದ ಮೇಲೆ ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು. ಸಾಮಾನ್ಯ ಅರ್ಹತೆ 500 ರೂ.ಗಳು. ಪ್ರವರ್ಗ 2ಎ, 2 ಬಿ, 3ಎ, 3 ಬಿ 300 ರೂ.ಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕರಿಗೆ 200 ರೂ.ಗಳು ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಬ್ಯಾಂಕ್ ಶುಲ್ಕ ಪಾವತಿ ಮಾಡದ ದಾಖಲೆ/ ಭಾವಚಿತ್ರ ಅಪ್ ಲೋಡ್ ಮಾಡದಿರುವ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ. ಒಮ್ಮೆ ಪಾವತಿ ಮಾಡಿದ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ. ಇತರ ಪರೀಕ್ಷೆ, ನೇಮಕಾತಿಗೆ ಹೊಂದಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಯ ಅರ್ಹತೆಯ ವಿಷಯದಲ್ಲಿ ಸಿಬ್ಬಂದಿ ಆಯ್ಕೆ ಪ್ರಾಧಿಕಾರದ ನಿರ್ಧಾರವೇ ಅಂತಿಮವಾಗಿರುತ್ತದೆ. ಅಭ್ಯರ್ಥಿಯ ಹೆಸರು ಅಂತಿಮ ಆಯ್ಕೆ ಪಟ್ಟಿಯಲ್ಲಿ ಬಂದಿದೆ ಎಂಬುದರ ಆಧಾರದ ಮೇಲೆ ಅಭ್ಯರ್ಥಿಗೆ ನೇಮಕಾತಿಯ ಯಾವುದೇ ಹಕ್ಕು ದೊರೆಯುವುದಿಲ್ಲ.
ಆಯ್ಕೆ ಸಂಬಂಧವಾಗಿ ಕಛೇರಿಯೊಂದಿಗೆ ಯಾವುದೇ ಪತ್ರ ವ್ಯವಹಾರಕ್ಕೆ ಆಸ್ಪದ ಇರುವುದಿಲ್ಲ. ಈ ಅಧಿಸೂಚನೆಯನ್ನು ಯಾವುದೇ ಕಾರಣವನ್ನು ನೀಡದೆ ಯಾವುದೇ ಸಮಯದಲ್ಲಿ ರದ್ದುಗೊಳಿಸುವ ಅಧಿಕಾರವು ಸಿಬ್ಬಂದಿ ಆಯ್ಕೆ ಪ್ರಾಧಿಕಾರಕ್ಕೆ ಇರುತ್ತದೆ.
ಅರ್ಜಿ ಸಲ್ಲಿಕೆ ಮಾಡಲು ಮತ್ತು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bagalkot.nic.in












Click it and Unblock the Notifications