ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಜಿಸಿಎ ನೇಮಕಾತಿ; 27 ಹುದ್ದೆಗಳಿಗೆ ಪದವೀಧರರು ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಆಗಸ್ಟ್ 30; ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) Consultant ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 3 ಕೊನೆಯ ದಿನವಾಗಿದೆ.

ಒಟ್ಟು 27 Consultant ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಕರೆದಿದ್ದು ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ: 13 ಹುದ್ದೆಗಳಿವೆ ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ: 13 ಹುದ್ದೆಗಳಿವೆ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯ ನೇಮಕಾತಿ ನಿಯಮಗಳ ಅನ್ವಯ ಯಾವುದೇ ಪದವಿ, ಇಂಜಿನಿಯರಿಂಗ್ ವಿಷಯದಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 75,000 ರೂ. ವೇತನ ನಿಗದಿ ಮಾಡಲಾಗಿದೆ.

ಸಿಎಸ್‌ಜಿ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸಕ್ಕೆ ಅರ್ಜಿ ಹಾಕಿ ಸಿಎಸ್‌ಜಿ ನೇಮಕಾತಿ; ಬೆಂಗಳೂರಿನಲ್ಲಿ ಕೆಲಸಕ್ಕೆ ಅರ್ಜಿ ಹಾಕಿ

Apply For 27 Consultant Posts At DGCA

ನಾಗರಿಕ ವಿಮಾನಯಾನ ನಿರ್ದೇಶನಾಲಯ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 19 ಆಗಸ್ಟ್ 2021ಕ್ಕೆ ಅನ್ವಯ ವಾಗುವಂತೆ 63 ವರ್ಷ ಮೀರಿರಬಾರದು. ಕೆಲವು ವರ್ಗದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 142 ಹುದ್ದೆಗಳಿಗೆ ಅರ್ಜಿ ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 142 ಹುದ್ದೆಗಳಿಗೆ ಅರ್ಜಿ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಕೆ ಮಾಡಬೇಕು.

ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಅರ್ಜಿಗಳನ್ನು ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸೆಪ್ಟೆಂಬರ್ 3ರೊಳಗೆ ತಲುಪುವಂತೆ ಸಲ್ಲಿಸಬೇಕು. Recruitment Section, Directorate General of Civil Aviation, Opp. Safdarjung Airport, Aurobindo Marg, New Delhi - 110003.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‌ ಸೈಟ್‌ಗೆ ಭೇಟಿ ನೀಡಬಹುದಾಗಿದೆ. ವೆಬ್ ಸೈಟ್ ವಿಳಾಸ dgca.nic.in

English summary
Directorate General of Civil Aviation invited applications for consultant posts. Candidates can apply till September 3, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X