301 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ಜನವರಿ 13 : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ವೈರ್‌ ಲೆಸ್) ಹುದ್ದೆಗಳಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 9, 2016.

ಒಟ್ಟು 301 ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ (ವೈರ್‌ ಲೆಸ್) (ಪುರುಷ) 249 ಹುದ್ದೆಗಳು. ರಾಜ್ಯ ಮಟ್ಟದ ಸ್ಥಳೀಯ ವೃಂದ ಪೊಲೀಸ್ ಕಾನ್ಸ್‌ಟೇಬಲ್ (ವೈರ್ ಲೆಸ್) (ಪುರುಷ) 22 ಹುದ್ದೆಗಳು. ಪೊಲೀಸ್ ಕಾನ್ಸ್‌ಟೇಬಲ್ (ವೆರ್ ಲೆಸ್) (ಮಹಿಳಾ) 28 ಹುದ್ದೆಗಳು. ರಾಜ್ಯ ಮಟ್ಟದ ಸ್ಥಳೀಯ ವೃಂದ ಪೊಲೀಸ್ ಕಾನ್ಸ್‌ಟೇಬಲ್ (ವೈರ್ ಲೆಸ್) (ಮಹಿಳಾ) 2 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. [1638 ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ]

jobs

ಹುದ್ದೆಗಳ ವರ್ಗೀಕರಣವನ್ನು www.ksp.gov.in ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೈಹಿಕ ಶಕ್ತಿಯ ಪರೀಕ್ಷೆಯನ್ನು ಪ್ರತ್ಯೇಕವಾಗಿ ಬೇರೆ-ಬೇರೆ ದಿನಗಳಂದು ನಡೆಸಲಾಗುತ್ತದೆ. ಈ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡರೆ ಮಾತ್ರ ಲಿಖಿತ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. [441 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಮೆಸ್ಕಾಂ]

ವಯೋಮಿತಿ : ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗೆ 19 ವರ್ಷ ವಯಸ್ಸಾಗಿರಬೇಕು. ಪ.ಜಾ/ಪ.ಪಂ/ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಟ ವಯೋಮಿತಿ ನಿಗದಿ ಮಾಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 25 ವರ್ಷಗಳು. [ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದ ksrtc]

ಅರ್ಜಿ ಶುಲ್ಕಗಳು : ಸಾಮಾನ್ಯ ವರ್ಗ/ಪ್ರವರ್ಗ 2ಎ/2ಬಿ/3ಎ/3ಬಿಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ.ಗಳು, ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 100 ರೂ.ಗಳು. ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಗಳಲ್ಲಿ ಅಥವ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್‌ನಲ್ಲಿ ಚಲನ್ ನೀಡಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 080-22943346 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka State Police (KSP) invites applications for the 301 police constable posts (Wireless). February 9, 2016 last date for submit application.
Please Wait while comments are loading...