ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

|
Google Oneindia Kannada News

ಮಡಿಕೇರಿ, ಏಪ್ರಿಲ್ 26; ಜಿಲ್ಲಾಧಿಕಾರಿಗಳ ಕಾರ್ಯಾಲಯ ಕೊಡಗು ಗ್ರಾಮ ಲೆಕ್ಕಿಗರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 19/5/2022.

ಕೊಡಗು ಜಿಲ್ಲಾ ಕಂದಾಯ ಘಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 15 ಸಾವಿರ ಶಿಕ್ಷಕರ ನೇಮಕಾತಿ; ಮಹತ್ವದ ಸೂಚನೆಗಳೊಂದಿಗೆ ಅರ್ಜಿ ತುಂಬುವ ದಿನಾಂಕ ವಿಸ್ತರಣೆ 15 ಸಾವಿರ ಶಿಕ್ಷಕರ ನೇಮಕಾತಿ; ಮಹತ್ವದ ಸೂಚನೆಗಳೊಂದಿಗೆ ಅರ್ಜಿ ತುಂಬುವ ದಿನಾಂಕ ವಿಸ್ತರಣೆ

ಒಟ್ಟು 35 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಬೆಂಗಳೂರಲ್ಲಿ ಕೆಲಸ ಖಾಲಿ ಇದೆ; ಮೇ 20ರ ತನಕ ಅರ್ಜಿ ಹಾಕಿ ಬೆಂಗಳೂರಲ್ಲಿ ಕೆಲಸ ಖಾಲಿ ಇದೆ; ಮೇ 20ರ ತನಕ ಅರ್ಜಿ ಹಾಕಿ

Apply For 35 Village Accountant Post At Kodagu

ಖಾಲಿ ಇರುವ ಹೊಸ ಹುದ್ದೆಗಳ ಸಂಖ್ಯೆ 33. ಬ್ಯಾಕ್ ಲಾಗ್ ಹುದ್ದೆಗಳ ಸಂಖ್ಯೆ 2, 13 ಸಾಮಾನ್ಯ ಗ್ರಾಮೀಣ, 14 ಸಾಮಾನ್ಯ ಕನ್ನಡ ಮಾಧ್ಯಮ, ಒಟ್ಟು ಖಾಲಿ ಹುದ್ದೆಗಳು 35.

ವಿದ್ಯಾರ್ಹತೆ ವಿವರ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವ 12ನೇ ತರಗತಿ (ಸಿಬಿಎಸ್‌ಇ & ಐಸಿಎಸ್‌ಇ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ನೇಮಕಾತಿ ವಿವರಗಳು ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ನೇಮಕಾತಿ ವಿವರಗಳು

ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 200 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 400 ರೂ. ಶುಲ್ಕ ಪಾವತಿ ಮಾಡಬೇಕು.

Apply For 35 Village Accountant Post At Kodagu

ಅರ್ಜಿಯನ್ನು ಆನ್‌ಲೈನ್ ಮೂಲಕ ಭರ್ತಿ ಮಾಡಿದ ಬಳಿಕ ಆನ್‌ಲೈನ್‌ನಲ್ಲಿಯೇ ಶುಲ್ಕವನ್ನು ಭರ್ತಿ ಮಾಡಿ ಸ್ವೀಕೃತಿ ಪತ್ರವನ್ನು ಪಡೆದು ಇಟ್ಟುಕೊಳ್ಳಬೇಕು. ಆನ್‌ಲೈನ್‌ನಲ್ಲಿ ಪಾವತಿ ಮಾಡಲು ಆಗದಿದ್ದಲ್ಲಿ ಎಸ್‌ಬಿಐ ಶಾಖೆಯಲ್ಲಿ ಬ್ಯಾಂಕ್ ಶುಲ್ಕದೊಂದಿಗೆ ಪಾವತಿ ಮಾಡಬೇಕು.

ವಯೋಮಿತಿ; ಅರ್ಜಿಗಳನ್ನು ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು. ಹಿಂದುಳಿದ ವರ್ಗ (2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು) 38 ವರ್ಷಗಳು. ಸಾಮಾನ್ಯ ವರ್ಗಕ್ಕೆ 35 ವರ್ಷಗಳು.

ಅಭ್ಯರ್ಥಿಗಳಿಗೆ ಸೂಚನೆಗಳು; ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕಾರ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರಚಾರ, ಶಿಫಾರಸು ಮಾಡಿದರೆ ಅಂತಹ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.

ಅರ್ಜಿದಾರರ ಜೊತೆ ಯಾವುದೇ ಪತ್ರ ವ್ಯವಹಾರಗಳಿಗೆ ಅವಕಾಶವಿಲ್ಲ. ನೇಮಕಾತಿಯ ಬಗ್ಗೆ ಅಂತಿಮ ತೀರ್ಮಾನವನ್ನು ನೇಮಕಾತಿ ಪ್ರಾಧಿಕಾರಿಯಾದ ಜಿಲ್ಲಾಧಿಕಾರಿಗಳು ಕೊಡಗು ಜಿಲ್ಲೆ ಅವರು ಕಾಯ್ದಿರಿಸಿಕೊಂಡಿದ್ದಾರೆ.

ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೀಸಲಾತಿ ಸೌಲಭ್ಯ ಅಪೇಕ್ಷಿಸುವ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ನಿಗದಿತ ನಮೂನೆಯಲ್ಲಿ ಸಂಬಂಧಪಟ್ಟ ಕಂದಾಯ ಪ್ರಾಧಿಕಾರದಿಂದ (ಸಂಬಂಧಪಟ್ಟ ತಹಶೀಲ್ದಾರ್‌ರಿಂದ) ಪ್ರಮಾಣ ಪತ್ರ ಪಡೆದು ದಾಖಲಾತಿ ಪರಿಶೀಲನಾ ಸಮಯದಲ್ಲಿ ಹಾಜರುಪಡಿಸಬೇಕು.

ಅರ್ಜಿ ಸಲ್ಲಿಕೆ ಮಾಡುವಾಗ ತಪ್ಪು/ ಸುಳ್ಳು ಮಾಹಿತಿಯನ್ನು ನೀಡಿ ಉದ್ಯೋಗ ಪಡೆಯುವ ಅಭ್ಯರ್ಥಿಗಳ ನೇಮಕಾತಿಯನ್ನು ವಜಾಗೊಳಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ. ಅರ್ಜಿಯಲ್ಲಿ ನೀಡಿರುವ ವಿಳಾಸವೇ ಅಂತಿಮವಾಗಿದ್ದು, ಎಲ್ಲಾ ಪತ್ರ ವ್ಯವಹಾರಕ್ಕೆ ಅದೇ ವಿಳಾಸ ಬಳಕೆ ಮಾಡಲಾಗುತ್ತದೆ. ನಂತರದಲ್ಲಿ ವಿಳಾಸ ಬದಲಾವಣೆಗೆ ಪತ್ರ ವ್ಯವಹಾರ ಮಾಡಲು ಅವಕಾಶವಿಲ್ಲ.

ಅಭ್ಯರ್ಥಿಯ ಅರ್ಹತೆ ವಿಚಾರದಲ್ಲಿ ನೇಮಕಾತಿ ಪ್ರಾಧಿಕಾರದ ತೀರ್ಮಾನವೇ ಅಂತಿಮವಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡುವ ಮೊದಲು ಕಡ್ಡಾಯವಾಗಿ ನೇಮಕಾತಿ ಆದೇಶ ಓದಿಕೊಳ್ಳಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ https://kodagu-va.kar.nic.in/

English summary
Apply for village accountant post at Kodagu. Candidates can submit applications till 19/5/2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X