ಮೈಸೂರಿನಲ್ಲಿ ಕೆಲಸ ಖಾಲಿ ಇದೆ; 45 ಹುದ್ದೆಗಳಿಗೆ ಅರ್ಜಿ ಹಾಕಿ

ಮೈಸೂರು, ಏಪ್ರಿಲ್ 30; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೈಸೂರು ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು 4/7/2023 ಕೊನೆಯ ದಿನವಾಗಿದೆ.

ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 45 ಸೇವಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಭಾರತೀಯ ಸ್ಟೇಟ್ ಬ್ಯಾಂಕ್‌ ಚಲನ್‌ ಮುಖಾಂತರ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 8/7/2023.

Apply For 45 Peon Post At Mysuru District Court

ಒಟ್ಟು ಭರ್ತಿ ಮಾಡಲಾಗುತ್ತಿರುವ ಹುದ್ದೆಗಳು 45. ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 ರಿಂದ 28,950 ರೂ. ತನಕ ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು 10ನೇ ತರಗತಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ; ಆಯ್ಕೆಗೊಂಡ ಅಭ್ಯರ್ಥಿಗಳು ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್) ವ್ಯಾಪ್ತಿಗೆ ಒಳಪಡುತ್ತಾರೆ. ಅರ್ಜಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷಗಳು. 2ಎ/ 2ಬಿ/ 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿ ಮೀರಿರಬಾರದು.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಅರ್ಜಿ ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿಸಬೇಕು.

Apply For 45 Peon Post At Mysuru District Court

ಆಯ್ಕೆಯ ವಿಧಾನ; ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007 ಮತ್ತು 2021ರ ಅನ್ವಯ ನೇರ ನೇಮಕಾತಿಯ ಮೂಲಕ ನಡೆಸಲಾಗುತ್ತದೆ.

ಎಸ್. ಎಸ್. ಎಲ್. ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು, ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.

ಯಾವುದೇ ವರ್ಗಗಳ ಮಹಿಳಾ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು, ಕನ್ನಡ ಮಾಧ್ಯಮ ಅಭ್ಯರ್ಥಿಗಳು, ಯೋಜನಾ ನಿರಾಶ್ರಿತ ಅಭ್ಯರ್ಥಿಗಳು ಹಾಗೂ ಗ್ರಾಮೀಣ ಅಭ್ಯರ್ಥಿಗಳ ಮೀಸಲಾತಿಗಳಿಗೆ ಅರ್ಹರು ಲಭ್ಯವಿರದೇ ಇದ್ದ ಪಕ್ಷದಲ್ಲಿ, ಆ ಹುದ್ದೆಗಳನ್ನು ಆಯಾ ಪ್ರವರ್ಗಗಳ, ಇತರೆ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು. ಆಯಾ ಪ್ರವರ್ಗಗಳ ಇತರೆ ಅಭ್ಯರ್ಥಿಗಳೂ ಸಹ ಲಭ್ಯವಾಗದಿದ್ದಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಆಯಾ ಪ್ರವರ್ಗಗಳ ಅರ್ಹ ಅಭ್ಯರ್ಥಿಗಳ ಲಭ್ಯತೆಯ ಕೊರತೆಯಿಂದಾಗಿ ಭರ್ತಿ ಮಾಡಲಾಗದ ರಿಕ್ತ ಸ್ಥಾನಗಳನ್ನು ಬ್ಯಾಕ್ ಲಾಗ್‌ ಎಂದು ಪರಿಗಣಿಸಿ ಮುಂದಕ್ಕೆ ಕೊಂಡೊಯ್ಯಲಾಗುವುದು.

ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ https://districts.ecourts.gov.in/mysuru-onlinerecruitment

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+