ಎಸ್‌ಬಿಐ ನೇಮಕಾತಿ; 46 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಬೆಂಗಳೂರು, ಆಗಸ್ಟ್ 15; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 46 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಸೆಪ್ಟೆಂಬರ್ 2, 2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ದೇಶಾದ್ಯಂತ ಖಾಲಿ ಇರುವ 46 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಎಸ್‌ಬಿಐ ಅಧಿಸೂಚನೆ ಪ್ರಕಟಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 36000-63840 ರೂ. ವೇತನವನ್ನು ನಿಗದಿಗೊಳಿಸಲಾಗಿದೆ.

ಅಸಿಸ್ಟೆಂಟ್ ಮ್ಯಾನೇಜರ್ - ಇಂಜಿನಿಯರ್ (ಸಿವಿಲ್) 36 ಹುದ್ದೆಗಳು. ಅಸಿಸ್ಟೆಂಟ್ ಮ್ಯಾನೇಜರ್ - ಇಂಜಿನಿಯರ್ (ಎಲೆಕ್ಟ್ರಿಕಲ್) 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Apply For 46 Assistant Manager Posts At SBI

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಎಸ್‌ಬಿಐ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ (1 ಏಪ್ರಿಲ್ 2021)ಕ್ಕೆ ಅನ್ವಯವಾಗುವಂತೆ. ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಸಹ ಇದೆ.

ಅರ್ಜಿ ಸಲ್ಲಿಸುವ ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವ ಮೊದಲು ವೆಬ್‌ಸೈಟ್‌ನಲ್ಲಿ ಸರಿಯಾ ಇ-ಮೇಲ್ ಐಡಿ ಮತ್ತು ಮೊಬೈಲ್ ನಂಬರ್ ನಮೂದು ಮಾಡಬೇಕು.

ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 2, 2021 ಕೊನೆಯ ದಿನವಾಗಿದೆ. ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ 25 ಸೆಪ್ಟೆಂಬರ್.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ sbi.co.in

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+