ಕೋಲಾರದಲ್ಲಿ ಕೆಲಸ ಖಾಲಿ ಇದೆ; ನ. 19ರ ತನಕ ಅರ್ಜಿ ಹಾಕಿ

ಕೋಲಾರ, ಅಕ್ಟೋಬರ್ 27: ಕೋಲಾರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು 19/11/2023ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಸೇವಾ) (ನಿಯಮಗಳು 2022 ರನ್ವಯ ಕೋಲಾರ ಜಿಲ್ಲೆಯ 5 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

library-supervisor-jobs-kolar

ಮಾಲೂರು ತಾಲೂಕಿನ ಟೇಕಲ್, ಮುಳಬಾಗಿಲು ತಾಲೂಕಿನ ಸೊನ್ನೆವಾಡಿ, ಮುಳಬಾಗಿಲು ತಾಲೂಕಿನ ತಾಯಲೂರು, ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಮತ್ತು ಕೋಲಾರ ತಾಲೂಕಿನ ಮಣಿಘಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು. ಪರಂತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯ ಲಭ್ಯತೆ ಇಲ್ಲದೇ ಇದ್ದಲ್ಲಿ ಆಯಾ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಜಿಲ್ಲಾ ಪಂಚಾಯತ್ ಕೋಲಾರ ಕಛೇರಿಯಿಂದ ಹೊರಡಿಸಿರುವ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುತ್ತದೆ.

ನಿಯಮಾನುಸಾರ ಅರ್ಜಿಯೊಂದಿಗೆ ಸಲ್ಲಿಸುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗುವುದರಿಂದ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳನ್ನು ಅಭ್ಯರ್ಥಿಯ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಪಡೆದಿಟ್ಟುಕೊಂಡು, ಸಲ್ಲಿಸಬೇಕು.

ವಯೋಮಿತಿ, ವಿದ್ಯಾರ್ಹತೆ; ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ಆಗಿಂದ್ಗಾಗೆ ನಿಗದಿಪಡಿಸುವ ಕನಿಷ್ಠ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ/ ಸರ್ಟಿಪಿಕೇಷನ್ ಕೋರ್ಸ್ ಇನ್ ಲ್ರೈಬ್ರರಿ ಸೈನ್ಸ್, ಮಾನ್ಯತೆ ಪಡೆದಿರುವ ಸಂಸ್ಥೆಗಳಿಂದ 3 ತಿಂಗಳ ಕಂಪ್ಯೂಟರ್ ಕೋರ್ಸ್‌ ಪ್ರಮಾಣ ಪತ್ರಗಳನ್ನು ಪಡೆದಿರಬೇಕು.

ಅರ್ಜಿ ಸಲ್ಲಿಸುವವರಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ. ಪ್ರವರ್ಗ 2 (ಎ), 2(ಬಿ), 3(ಎ), 3 (ಬಿ) ವರ್ಗಕ್ಕೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 40 ವರ್ಷಗಳು.

ಅರ್ಜಿಯೊಂದಿಗೆ ಸಲ್ಲಿಸುವ ದಾಖಲೆಗಳ ಪರಿಶೀಲನೆ ಮಾಡಲಾಗುವುದು, ಅವಶ್ಯಕ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿಯು ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲು ತೀರ್ಮಾನಿಸಿದಲ್ಲಿ ಅರ್ಜಿಯೊಂದಿಗೆ ಲಗತ್ತಿಸಿರುವ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು, ಏನೇ ಸಂದರ್ಭವಿದ್ದರೂ ವಯೋಮಿತಿ, ವಿದ್ಯಾರ್ಹತೆ ಮತ್ತು ಮೀಸಲಾತಿಗಳಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಲಗತ್ತು ಮಾಡಲಾದ ಪ್ರಮಾಣ ಪತ್ರಗಳನ್ನೇ ಅಂತಿಮವೆಂದು ತೀರ್ಮಾನಿಸಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಜಾಗರೂಕತೆಯಿಂದ ತಮಗೆ ಅನ್ವಯಿಸುವ ಎಲ್ಲಾ ದಾಖಲೆಗಳನ್ನು ಸಲ್ಲಿಸುವುದು.

ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದಿರುವ ಬಗ್ಗೆ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು/ ಎಲ್ಲಾ ವರ್ಷಗಳ ಅಂಕಪಟ್ಟಿಗಳು ಹಾಗೂ ಅಭ್ಯರ್ಥಿಗಳು ತಮಗೆ ಅನ್ವಯಿಸುವ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರುವ ಬಗ್ಗೆ ಸಂಬಂಧಿತ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸುವುದು ಕಡ್ಡಾಯವಾಗಿರುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆಗಳು 9480870001, 9916588015

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+