ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

61 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 07 : ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯು ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 29/2/2020ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಒಟ್ಟು 61 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಜನವರಿ 31ರಿಂದ ಫೆಬ್ರವರಿ 29ರ ತನಕ ಅರ್ಜಿಗಳನ್ನು ಸಲ್ಲಿಸಬೇಕು. ಶುಲ್ಕ ಪಾವತಿ ಮಾಡಲು 4/3/2020 ಕೊನೆಯ ದಿನವಾಗಿದೆ.

ಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಕೆಪಿಎಸ್‌ಸಿ ನೇಮಕಾತಿ; 1112 ಎಫ್‌ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 29/2/2020ರೊಳಗೆ ಯಾವುದೇ ಪಶು ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವ ಭಾರತದಲ್ಲಿ ಕಾನೂನು ಮೂಲಕ ಸ್ಥಾಪಿಸಲಾದ ಪಶು ವಿಶ್ವವಿದ್ಯಾಲಯ ಅಥವ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ 50ರಷ್ಟು ಅಂಕಗಳೊಂದಿಗೆ ಬಿ. ಬಿ. ವಿ. ಎಸ್‌. ಸಿ & ಎಚ್. ಹೆಚ್‌ ಪದವಿ ಹೊಂದಿರಬೇಕು.

ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ ಕೆಪಿಎಸ್‌ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ

Apply For 61 Veterinary Doctor Post

ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ ಕಾಯ್ದೆ 1984 ಅಡಿಯಲ್ಲಿನ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು ಹಾಗೂ ಈ ನೋಂದಣಿ ಚಾಲ್ತಿಯಲ್ಲಿರಬೇಕು.

ಶಿವಮೊಗ್ಗದಲ್ಲಿ ಫೆಬ್ರವರಿ 24, 25ರಂದು ಬೃಹತ್ ಉದ್ಯೋಗ ಮೇಳ ಶಿವಮೊಗ್ಗದಲ್ಲಿ ಫೆಬ್ರವರಿ 24, 25ರಂದು ಬೃಹತ್ ಉದ್ಯೋಗ ಮೇಳ

ವಯೋಮಿತಿ ವಿವರ : ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2(ಎ), ಪ್ರವರ್ಗ 2 (ಬಿ), ಪ್ರವರ್ಗ 3 (ಎ), ಪ್ರವರ್ಗ 3 (ಬಿ), ಹಿಂದುಳಿದ ವರ್ಗ 38 ವರ್ಷಗಳು. ಪ್ರವರ್ಗ-1/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ 40 ವರ್ಷಗಳು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

English summary
Apply for 61 veterinary doctor post. Candidates can apply from January 31 to February 29, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X