61 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಫೆಬ್ರವರಿ 07 : ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯು ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 29/2/2020ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಒಟ್ಟು 61 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಜನವರಿ 31ರಿಂದ ಫೆಬ್ರವರಿ 29ರ ತನಕ ಅರ್ಜಿಗಳನ್ನು ಸಲ್ಲಿಸಬೇಕು. ಶುಲ್ಕ ಪಾವತಿ ಮಾಡಲು 4/3/2020 ಕೊನೆಯ ದಿನವಾಗಿದೆ.
ಕೆಪಿಎಸ್ಸಿ ನೇಮಕಾತಿ; 1112 ಎಫ್ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 29/2/2020ರೊಳಗೆ ಯಾವುದೇ ಪಶು ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವ ಭಾರತದಲ್ಲಿ ಕಾನೂನು ಮೂಲಕ ಸ್ಥಾಪಿಸಲಾದ ಪಶು ವಿಶ್ವವಿದ್ಯಾಲಯ ಅಥವ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ 50ರಷ್ಟು ಅಂಕಗಳೊಂದಿಗೆ ಬಿ. ಬಿ. ವಿ. ಎಸ್. ಸಿ & ಎಚ್. ಹೆಚ್ ಪದವಿ ಹೊಂದಿರಬೇಕು.
ಕೆಪಿಎಸ್ಸಿ ನೇಮಕಾತಿ; ದೆಹಲಿ ಕರ್ನಾಟಕ ಭವನದಲ್ಲಿ ಕೆಲಸ
ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ ಕಾಯ್ದೆ 1984 ಅಡಿಯಲ್ಲಿನ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು ಹಾಗೂ ಈ ನೋಂದಣಿ ಚಾಲ್ತಿಯಲ್ಲಿರಬೇಕು.
ಶಿವಮೊಗ್ಗದಲ್ಲಿ ಫೆಬ್ರವರಿ 24, 25ರಂದು ಬೃಹತ್ ಉದ್ಯೋಗ ಮೇಳ
ವಯೋಮಿತಿ ವಿವರ : ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2(ಎ), ಪ್ರವರ್ಗ 2 (ಬಿ), ಪ್ರವರ್ಗ 3 (ಎ), ಪ್ರವರ್ಗ 3 (ಬಿ), ಹಿಂದುಳಿದ ವರ್ಗ 38 ವರ್ಷಗಳು. ಪ್ರವರ್ಗ-1/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ 40 ವರ್ಷಗಳು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ