ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ; 69 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಜನವರಿ 17 : ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 15/2/2020 ಕೊನೆಯ ದಿನವಾಗಿದೆ.

ಕಂದಾಯ ಘಟಕದಲ್ಲಿ ಪದೋನ್ನತಿ, ವಯೋ ನಿವೃತ್ತಿಯಿಂದ ಖಾಲಿ ಆಗಿರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಒಟ್ಟು 69 ಹುದ್ದೆಗಳಿದ್ದು, ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಜಲಮಂಡಳಿಯಲ್ಲಿ 277 ವಿವಿಧ ಹುದ್ದೆಗಳಿವೆ, ಅರ್ಜಿ ಹಾಕಿ ಜಲಮಂಡಳಿಯಲ್ಲಿ 277 ವಿವಿಧ ಹುದ್ದೆಗಳಿವೆ, ಅರ್ಜಿ ಹಾಕಿ

ಹುದ್ದೆಗಳ ಸಂಖ್ಯೆಯನ್ನು ಕಡಿಮೆ ಅಥವ ಹೆಚ್ಚು ಮಾಡುವ ಅಧಿಕಾರ ನೇಮಕಾತಿ ಪ್ರಾಧಿಕಾರಕ್ಕೆ ಇರುತ್ತದೆ. ನೇಮಕವಾಗುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಸೇವೆ ಸಲ್ಲಿಸಬೇಕಾಗುತ್ತದೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಕೊಪ್ಪಳ; 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿ ಕೊಪ್ಪಳ; 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿ

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ. ಜನವರಿ 16 ರಿಂದ ಫೆಬ್ರವರಿ 15ರ ತನಕ ಆಸ್ತಕರು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ಕೋಲಾರದಲ್ಲಿ ಫೆಬ್ರವರಿ 11, 12ರಂದು ಉದ್ಯೋಗ ಮೇಳ ಕೋಲಾರದಲ್ಲಿ ಫೆಬ್ರವರಿ 11, 12ರಂದು ಉದ್ಯೋಗ ಮೇಳ

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

ವಯೋಮಿತಿ ವಿವರಗಳು

ವಯೋಮಿತಿ ವಿವರಗಳು

ಅರ್ಜಿಗಳನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು. ಪ.ಜಾ/ಪ.ಪಂ/ಪ್ರವರ್ಗ-1 40 ವರ್ಷಗಳು, 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 38 ವರ್ಷ. ಸಾಮಾನ್ಯ ವರ್ಗದವರು 35 ವರ್ಷಗಳು.

ವಿದ್ಯಾರ್ಹತೆ ವಿವರಗಳು

ವಿದ್ಯಾರ್ಹತೆ ವಿವರಗಳು

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಿಬಿಎಸ್‌ಇ/ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮುಂಚಿತವಾಗಿ ಪಡೆದಿರಬೇಕು.

ಈ ವಿದ್ಯಾರ್ಹತೆ ಹೊರತುಪಡಿಸಿ ಬೇರೆ ಯಾವುದೇ ಅಂಕಪಟ್ಟಿಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ.

ಅರ್ಜಿ ಶುಲ್ಕದ ವಿವರ

ಅರ್ಜಿ ಶುಲ್ಕದ ವಿವರ

ಅರ್ಜಿಗಳನ್ನು ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100 ರೂ., ಇತರೆ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕ್‌ನಲ್ಲಿ ಪಾವತಿ ಮಾಡಲು 17/2/2020 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ

ಅರ್ಜಿ ಸಲ್ಲಿಸುವುದು ಹೇಗೆ

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ನೇಮಕಾತಿ ಹೊಂದಿದ ಅಭ್ಯರ್ಥಿಗಳು ಎರಡು ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯನ್ನು ಹಾಗೂ ಐದು ವರ್ಷಗಳ ಸೇವೆಯನ್ನು ಶಿವಮೊಗ್ಗ ಜಿಲ್ಲೆಯಲ್ಲಿಯೇ ಪೂರೈಸತಕ್ಕದ್ದು. ಆಯ್ಕೆಯಾದ ಅಭ್ಯರ್ಥಿಗಳಿಗೆ 21400 ರಿಂದ 42 ಸಾವಿರ ರೂ. ತನಕ ವೇತನ ಶ್ರೇಣಿ ನಿಗದಿ ಮಾಡಲಾಗಿದೆ.

English summary
Application invited for the 69 Village Accountant post at Shivamogga. Candidates can apply till 15th February 2020 through online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X