ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ; ಮಾರ್ಚ್ 23ರ ತನಕ ಅರ್ಜಿ ಹಾಕಿ
ಬಳ್ಳಾರಿ, ಮಾರ್ಚ್ 01; ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಿವಿಧೆಡೆ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿರ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಸಂಡೂರು ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
7 ಅಂಗನವಾಡಿ ಕಾರ್ಯಕರ್ತೆ ಮತ್ತು 22 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 23 ಕೊನೆಯ ದಿನವಾಗಿದೆ.

ಸೂಚನೆಗಳು: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆನ್‍ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಆನ್‍ಲೈನ್‍ನಲ್ಲಿ ಲಗತ್ತಿಸಿರುವ ನೇಮಕಾತಿ ಮಾರ್ಗಸೂಚಿ/ ನಿಬಂಧನೆಗಳನ್ನು ತಿಳಿದುಕೊಂಡು ನಂತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವುದು. ಎಲ್ಲಾ ಅಗತ್ಯ ದಾಖಲಾತಿಗಳನ್ನು ಅನ್‍ಲೈನ್ ಮೂಲಕವೇ ಸಲ್ಲಿಸಬೇಕಿದೆ.
ಕಛೇರಿಗೆ ಅಂಚೆ ಲಕೋಟೆಯಿಂದ ಬಂದ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಆನ್‍ಲೈನ್ ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲಾತಿಗಳು ಸಲ್ಲಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಯು ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು ಖಾಯಂ ಹುದ್ದೆಯಾಗಿರುವುದಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದಲ್ಲಿ ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08395-261156.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ https://anganwadirecruit.kar.nic.in/
ಕಂಪ್ಲಿಯಲ್ಲಿಯೂ ಕೆಲಸ ಖಾಲಿ ಇದೆ; ವಿಜಯನಗರ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ 6 ಅಂಗನವಾಡಿ ಸಹಾಯಕಿಯರಗೆ ಅರ್ಜಿ ಕರೆಯಲಾಗಿದೆ.
ಗೌರವಧನದ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡುತ್ತಿದ್ದು, ಆಸಕ್ತರು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್ 23ರ ಸಂಜೆ 5.30 ಕೊನೆಯ ದಿನವಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಖಾಲಿಯಿರುವ ಹುದ್ದೆಗಳ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬಸವೇಶ್ವರ ಬಡಾವಣೆ, ಸಪ್ತಗಿರಿ ಶಾಲೆ ಹತ್ತಿರ, ಕಾಲುವೆ ಮೇಲೆ ಹೊಸಪೇಟೆ ಇವರನ್ನು ಸಂಪರ್ಕಿಸಬಹುದು.
ತರಬೇತಿಗೆ ಅರ್ಜಿ ಆಹ್ವಾನ; ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಸರ್ಕಾರಿ ಟೂಲ್ ರೂಮ್ ಮತ್ತು ಟ್ರೈನಿಂಗ್ ಸೆಂಟರ್‌ನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನ ಅಲ್ಪಾವಧಿ ವೃತ್ತಿಪರ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ(ಸಿಎಂಕೆಕೆವೈ) ಯೋಜನೆಯಡಿ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತಲಾ 260 ಗಂಟೆಗಳ ಅವಧಿಯ ವಿವಿಧ ತರಬೇತಿ ನಡೆಯಲಿದೆ. ತರಬೇತಿ ಅವಧಿಯಲ್ಲಿ ಪರಿಶಿಷ್ಟರಿಗೆ ಮಾತ್ರ 2500 ರೂ. ಶಿಷ್ಯವೇತನ ನೀಡಲಾಗುತ್ತದೆ.
ಅಲ್ಪಾವಧಿ ವೃತ್ತಿಪರ ಕೌಶಲ್ಯ ಅಭಿವೃದ್ದಿ ತರಬೇತಿಗಳಾದ ಟೂಲ್ ರೂಮ್ ಮೆಕ್ಯಾನಿಕ್, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಉದ್ಯೋಗ ತರಬೇತಿಯು ಟೊಯೋಟಾ ಬಿಡದಿಯಲ್ಲಿ ಸ್ಟೈಫಂಡ್‍ನೊಂದಿಗೆ 2 ವರ್ಷಗಳು.
ಟರ್ನರ್, ಮಿಲ್ಲರ್, ಗ್ರೈಂಡರ್, ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್(ಪುರುಷ ಅಭ್ಯರ್ಥಿಗಳು), ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ (ಮಹಿಳಾ ಅಭ್ಯರ್ಥಿಗಳು) ಸೇರಿದಂತೆ ಈ ಎಲ್ಲಾ ತರಬೇತಿಗೆ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು ಮತ್ತು ಈ ಹುದ್ದೆಗಳಿಗೆ 4 ತಿಂಗಳ ಕಾಲ ತರಬೇತಿ. ಸಿ.ಎನ್.ಸಿ. ಪ್ರೋಗ್ರಾಮಿಂಗ್ ಮತ್ತು ಕಾರ್ಯಾಚರಣೆ, ವಿನ್ಯಾಸ ತಂತ್ರಾಂಶಗಳಾದ ಸಾಲಿಡ್ ವಕ್ರ್ಸ್, ಕ್ಯಾಟಿಯಾ, ಪ್ರೋ-ಇ, ಯುಜಿ ತರಬೇತಿಗಳಿಗೆ ಐಟಿಐ, ಡಿಪ್ಲೊಮಾ, ಬಿಇ ಮೆಕಾನಿಕ್ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 08394-200047, 8073979750, 9902397658, 8951883824.












Click it and Unblock the Notifications