ಅಂಚೆ ಇಲಾಖೆ ನೇಮಕಾತಿ; ನಂಜನಗೂಡು ವಿಭಾಗದಲ್ಲಿ 78 ಹುದ್ದೆ ಭರ್ತಿ

ಚಾಮರಾಜನಗರ, ಜನವರಿ 08: ಭಾರತೀಯ ಅಂಚೆ ಇಲಾಖೆಯು ನಂಜನಗೂಡು ವಿಭಾಗದಲ್ಲಿ ಖಾಲಿ ಇರುವ 78 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಜನವರಿ 20 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯುವ 18 ರಿಂದ 40ರ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ವಯೋಮಿಯಲ್ಲಿ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಯಾವುದೇ ಮುಖ್ಯ ಕಚೇರಿ ಅಥವಾ ಆಯ್ದ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದಾಗಿದೆ. ವೆಬ್ ಸೈಟ್‌ನ ಹೋಮ್ ಪೇಜ್ ನಲ್ಲಿ ನೀಡಲಾಗಿರುವ ಯುಆರ್‌ಎಲ್ ಲಿಂಕಿನ ಮೂಲಕವೂ ಪಾವತಿಸಬಹುದು.

 Apply For 78 Gramin Dak Sevak Post

ಮಹಿಳಾ ಅಭ್ಯರ್ಥಿಗಳು, ತೃತಿಯ ಲಿಂಗಿಗಳು, ಅಂಗವಿಕಲ ಅಭ್ಯರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿಯನ್ನು ಆನ್ ಲೈನ್ ನಲ್ಲಿ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.

ಆಸಕ್ತ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 08226-224430 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ವೆಬ್ ಸೈಟ್ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+