• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ; 8 ಹುದ್ದೆಗೆ ಅರ್ಜಿ ಹಾಕಿ

|

ಯಾದಗಿರಿ, ಮೇ 18 : ಯಾದಗಿರಿ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 8 ಬಿಎಫ್‌ಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮೇ 30ರ ಸಂಜೆ 5.30ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯಡಿ ಯಾದಗಿರಿ ಜಿಲ್ಲೆಯಲ್ಲಿ 8 ಬಿಎಫ್‍ಟಿ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಲ್ಲ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 45 ವರ್ಷದ ಒಳಗಿನವರಾಗಿದ್ದು, ಮನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರಾಗಿರಬೇಕು. ಕನಿಷ್ಠ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಕರ್ನಾಟಕ ಪೊಲೀಸ್ ನೇಮಕಾತಿ; ಹುದ್ದೆಗಳ ವಿವರಗಳು

ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿ ಹಾಕುವವರು ಈ ಅಧಿಸೂಚನೆಗೂ ಮುನ್ನ ಕಳೆದ ಎರಡು ವರ್ಷಗಳಲ್ಲಿ ಕನಿಷ್ಠ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಕೂಲಿಕಾರರಾಗಿ ಕೆಲಸ ಮಾಡಿರಬೇಕು.

ಕೆ. ಎಸ್. ಆರ್‌. ಪಿ ಕಾನ್ಸ್‌ಟೇಬಲ್ ನೇಮಕಾತಿ; 2672 ಹುದ್ದೆಗಳು

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 30ರಂದು ಸಾಯಂಕಾಲ 5.30ರ ಒಳಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯದ ಮನರೇಗಾ ಶಾಖೆಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯ ಅಗತ್ಯವಿದ್ದರೆ 08473-253758 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Applications invited for the Barefoot Technician(BFTs) post for MGNREGA scheme in Yadgir. Candidates can apply for 8 post till May 30, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X