• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ; ಬೆಂಗಳೂರಲ್ಲಿ ಕೆಲಸ

|

ಬೆಂಗಳೂರು, ಡಿಸೆಂಬರ್ 01: ಭಾರತೀಯ ಕ್ರೀಡಾ ಪ್ರಾಧಿಕಾರ ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಆಸಕ್ತರಿಂದ ಅರ್ಜಿಯನ್ನು ಕರೆದಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 18 ಕೊನೆಯ ದಿನವಾಗಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಬೆಂಗಳೂರು ನಗರದಲ್ಲಿ ಖಾಲಿ ಇರುವ Masseur ಹುದ್ದೆಯನ್ನು ಭರ್ತಿ ಮಾಡುತ್ತಿದೆ. ಒಟ್ಟು 8 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 35,000 ರೂ. ವೇತನ ನಿಗದಿ ಮಾಡಲಾಗಿದೆ.

ಬಿಬಿಎಂಪಿ ನೇಮಕಾತಿ; 1322 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಬೋರ್ಡ್ ಅಥವ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಪದವಿಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ.

ವಿವಿಧ ಇಲಾಖೆಗಳ ನೇಮಕಾತಿ; ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಡಿಸೆಂಬರ್ 18ರೊಳಗೆ jobs.saibangalore@gamil.com ವಿಳಾಸಕ್ಕೆ ಕಳಿಸಬೇಕಿದೆ.

ನೇಮಕಾತಿ ಸ್ಥಗಿತ; ಹಲವರ ಕೈ ತಪ್ಪಲಿದೆ ಸರ್ಕಾರಿ ಉದ್ಯೋಗ!

   ಜೀವ್ನ ತುಂಬಾ ಕಷ್ಟ ! | Oneindia Kannada

   ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

   English summary
   Sports Authority of India invited applications for the post of Masseur. Candidates can send applications till December 18, 2020.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X