ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಕೃಷಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಬೆಂಗಳೂರು, ಆಗಸ್ಟ್ 09: ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಯಡಿ ಉತ್ತೇಜನ ಘಟಕಗಳಲ್ಲಿ ಕಾರ್ಯ ನಿರ್ವಹಣೆ ಮಾಡಲ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅರ್ಜಿಗಳನ್ನು ಸಲ್ಲಿಸಲು 17/8/2020 ಕೊನೆಯ ದಿನವಾಗಿದೆ.

ಇಲಾಖೆಯು ಬೆಳೆ ವಿಮಾ ಯೋಜನೆಯಡಿ ಅನುಷ್ಟಾನಗೊಳಿಸುತ್ತಿರುವ ರಾಜ್ಯ ಮಟ್ಟದ ತಾಂತ್ರಿಕ ಉತ್ತೇಜನ ಘಟಕಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಣೆ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ನೇಮಕಾತಿ; 990 ಹುದ್ದೆಗಳಿಗೆ ಅರ್ಜಿ ಹಾಕಿ

ರಾಜ್ಯ ತಾಂತ್ರಿಕ ಘಟಕದ ಮುಖ್ಯಸ್ಥರು 1, ಕಾರ್ಯಕ್ರಮ ಸಂಯೋಜಕರು 1, ಸಂವಹನ ಅಧಿಕಾರಿ 1, ಸಾಮರ್ಥ್ಯವೃದ್ಧಿ ಅಧಿಕಾರಿ 1, ಮಾಹಿತಿ ತಂತ್ರಜ್ಞಾನ ಮತ್ತು ನಿರ್ವಹಣಾ ವ್ಯವಸ್ಥೆ ತಜ್ಞರು 1, ದತ್ತಾಂಶ ವಿಶ್ಲೇಷಕರು 1, ಮೇಲ್ವಿಚಾರಣೆ ಮತ್ತು ಮೌಲ್ಯ ಮಾಪನ ತಜ್ಞರು 1, ತೋಟಗಾರಿಕಾ ತಜ್ಞರು 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಎನ್‌ಸಿಎಲ್ ನೇಮಕಾತಿ; 512 ಹುದ್ದೆಗಳು ಖಾಲಿ ಇವೆ ಎನ್‌ಸಿಎಲ್ ನೇಮಕಾತಿ; 512 ಹುದ್ದೆಗಳು ಖಾಲಿ ಇವೆ

Apply For 8 Post In Karnataka Agriculture Department

ಈ ಹುದ್ದೆಗಳಿಗೆ ತತ್ಸಮಾನ ವಿದ್ಯಾರ್ಹತೆ ಹಾಗೂ ಅನುಭವವುಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ನೇರವಾಗಿ ಅಥವ ಅಂಚೆಯ ಮೂಲಕ ಸಲ್ಲಿಸಬಹುದು.

ಜೆಎನ್‌ಯುನಲ್ಲಿ ಕನ್ನಡ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ ಜೆಎನ್‌ಯುನಲ್ಲಿ ಕನ್ನಡ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿಯ ಲಕೋಟೆ ಮೇಲೆ ಹುದ್ದೆಯ ವಿವರಗಳನ್ನು ನಮೂದಿಸಬೇಕು. ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಹತೆಯುಳ್ಳ ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

ಅರ್ಜಿಗಳನ್ನು ಸಲ್ಲಿಸಲು ವಿಳಾಸ: ಕೃಷಿ ಆಯುಕ್ತರು, ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು 560001. 17/8/2020ರ ಸಂಜೆ 4 ಗಂಟೆಯ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.

ಅರ್ಜಿ ನಮೂನೆ ಮತ್ತು ಇತರ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದು.

English summary
Apply for 8 post under crop insurance scheme in Karnataka State Department of Agriculture (KSDA). Candidates can submit applications till 17/8/2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X