ಅರಣ್ಯ ಇಲಾಖೆಯಲ್ಲಿ 8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 23 : ಅರಣ್ಯ ಇಲಾಖೆ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 10/12/2019 ಕೊನೆಯ ದಿನವಾಗಿದೆ.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 8 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಗರಿಷ್ಠ 2 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಗುತ್ತಿಗೆ ಆಧಾರದ ಮೇಲೆ ನೇಮಕವಾದ ಅರಣ್ಯ ವ್ಯವಸ್ಥಾಪನಾಧಿಕಾರಿಗೆ ಮಾಸಿಕ ವೇತನ 50 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಒಂದು ವಾಹನವನ್ನು ಹೊರಗುತ್ತಿಗೆ ಆಧಾರ ಅಥವ ಬಾಡಿಗೆ ಆಧಾರದ ಮೇಲೆ ಒದಗಿಸಲಾಗುತ್ತದೆ.

ಆಯ್ಕೆಯಾದವರು ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ರಾಯಚೂರು, ಧಾರವಾಡದಲ್ಲಿ ಕೆಲಸ ಮಾಡಬೇಕಿದೆ. ಕರ್ತವ್ಯ ನಿರ್ವಹಿಸುವ ಕೇಂದ್ರಸ್ಥಾನದ ಜಿಲ್ಲಾ ವ್ಯಾಪ್ತಿಯ ಅರ್ಜಿದಾರರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಅರ್ಜಿದಾರರು ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು. ಅರಣ್ಯ ಮೋಜಣಿ ಹಾಗೂ ಗಡಿರೇಖೆ ಗುರುತಿಸುವಿಕೆ ಮತ್ತು ನಕಾಶೆ ತಯಾರಿಕೆ, ಭೂ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯದಂತೆ ಕರ್ತವ್ಯ ನಿರ್ವಹಿಸಬೇಕು.
ಅರ್ಜಿಯನ್ನು ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯ ದಿನಾಂಕಕ್ಕೆ ಅರ್ಜಿದಾರರು 70 ವರ್ಷ ವಯಸ್ಸನ್ನು ಮೀರಿಬಾರದು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಅಂಚೆ ಮೂಲಕ ಅಥವ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಬೇಕು.
www.aranya.gov.in ವೆಬ್ ಸೈಟ್‌ನಲ್ಲಿ ಅರ್ಜಿ ಮತ್ತು ಅಧಿಸೂಚನೆ ಲಭ್ಯವಿದೆ. 20/11/2019 ರಿಂದ 10/12/2019ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ವಿಳಾಸ : ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಮುಖ್ಯಸ್ಥರು ಅರಣ್ಯ ಪಡೆ), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು 560003












Click it and Unblock the Notifications