ಕಲಬುರಗಿ; ಕೆಲಸ ಖಾಲಿ ಇದೆ, ಜೂನ್ 30ರ ತನಕ ಅರ್ಜಿ ಹಾಕಿ

ಬೆಂಗಳೂರು, ಜೂನ್ 18 : ಕಲಬುರಗಿ ಜಿಲ್ಲೆಯಲ್ಲಿ 9 ಬಿ. ಎಫ್‌. ಟಿ. ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜೂನ್ 30ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕಲಬುರಗಿ ಜಿಲ್ಲಾ ಪಂಚಾಯತಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 9 ಬಿ.ಎಫ್.ಟಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ. ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

Apply For 9 Barefoot Technician Post Kalaburagi

ಅರ್ಜಿ ಸಲ್ಲಿಸುವ ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ. ಅಭ್ಯರ್ಥಿಯ ವಯೋಮಿತಿ 45 ವರ್ಷದೊಳಗಿರಬೇಕು. ಮಾಸಿಕ 12,000 ರೂ.ಗಳ ವೇತನ ನೀಡಲಾಗುತ್ತದೆ.

ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಪಂಚಾಯತ್ ನರೇಗಾ ಶಾಖೆಯಿಂದ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2020ರ ಜೂನ್ 30 ರೊಳಗಾಗಿ ಸಲ್ಲಿಸಬೇಕು.

ಸ್ಕ್ರೀನಿಂಗ್ ಟೆಸ್ಟ್ (Screening Test) ಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ದಿನಾಂಕ ತಿಳಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9482046044, 9480866010 ಸಂಖ್ಯೆಗಳಿಗೆ ಕರೆ ಮಾಡಲು ಕೋರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+