ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ, ನವೆಂಬರ್ 23ರೊಳಗೆ ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 05: ಬೆಂಗಳೂರು ನಗರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ನಗರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 23ರ ತನಕ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್‌ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜಕರ ಹುದ್ದೆಗೆಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳಿಗೆ ವಿವರಗಳು: ಅಕೌಂಟೆಟ್‌ನಲ್ಲಿ ತಜ್ಞರ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿ ಹಣಕಾಸು ಸಾಕ್ಷರತೆ ಮತ್ತು ಅರ್ಥಶಾಸ್ತ್ರ, ಬ್ಯಾಂಕಿಂಗ್ ಇತರೆ ವಿಭಾಗಗಳಲ್ಲಿ ಪದವೀಧರ ಆಗಿರಬೇಕು. ಸ್ನಾತಕೋತ್ತರ ಪದವಿ ಹೊಂದಿದವರಿಗೆ ಅದ್ಯತೆ ನೀಡಲಾಗುತ್ತದೆ.
ಸರ್ಕಾರಿ/ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ/ ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂಎಸ್ ಆಫೀಸ್ ಹಾಗೂ ಪಿಪಿಟಿಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜಕ ಹುದ್ದೆಗೆ ಕಂಪ್ಯೂಟರ್/ ಐಟಿ ಇತ್ಯಾದಿಗಳಲ್ಲಿ ಕೆಲಸ ಮಾಡುವ ಜ್ಞಾನದೊಂದಿಗೆ ಪದವಿ ಹೊಂದಿರಬೇಕು. ಸರ್ಕಾರಿ/ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಕನ್ನಡ/ ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂಎಸ್ ಆಫೀಸ್ ಹಾಗೂ ಪಿಪಿಟಿಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.
ಅರ್ಹ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ. ಹೆಚ್. ಮರಿಗೌಡ ರಸ್ತೆ, ಬೆಂಗಳೂರು-560029 ಇಲ್ಲಿಗೆ ತಮ್ಮ ರೆಸ್ಯೂಮ್ ಅನ್ನು ಎಲ್ಲಾ ದಾಖಲೆಗಳೊಂದಿಗೆ ನವೆಂಬರ್ 23ರೊಳಗೆ ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26578688 ಸಂಖ್ಯೆಗೆ ಕರೆ ಮಾಡಬಹುದು.
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯ ಸಂಪದವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಲು ಅರ್ಹರು.
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಫಲಾನುಭವಿಗಳಿಂದ ಮಾಸಿಕ ರೂ. 3000 ಶುಲ್ಕದಂತೆ ಪರವಾನಗಿ ಮುಖಾಂತರ ಮತ್ಸ್ಯ ಸಂಪದವಾಹಿನಿ ವಾಹನಗಳನ್ನು ನೀಡಲಾಗುತ್ತದೆ. ಅರ್ಜಿದಾರರು ಸಾಮಾನ್ಯ ವರ್ಗ ರೂ. 1ಲಕ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ವರ್ಗದವರು ರೂ. 50 ಸಾವಿರ ಪ್ರಾರಂಭಿಕ ಭದ್ರತಾ ಠೇವಣಿ ಪಾವತಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 8722574158, 7204911897.











Click it and Unblock the Notifications