ಲೆಕ್ಕಿಗರು, ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 20; ಮೈಸೂರಿನ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಪ್ರಕಟಣೆ ಹೊರಡಿಸಿ 7 ದಿನಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಹಾಯಕ ಆಯುಕ್ತರ ಕಚೇರಿಯಲ್ಲಿ ಲೆಕ್ಕಿಗರು, ಕಚೇರಿ ಸಹಾಯಕರ ಹುದ್ದೆ ಖಾಲಿಗಳನ್ನು ಭರ್ತಿ ಮಾಡಲಾಗುತ್ತಿದೆ. ಬಿ.ಕಾಂ, ಬಿಬಿಎಂ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 40 ವರ್ಷ ಮೀರಿರಬಾರದು. ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ ಮತ್ತು ಅಕೌಟೆಂಟ್ ಹುದ್ದೆಯಲ್ಲಿ ಕನಿಷ್ಟ 5 ವರ್ಷಗಳ ಅನುಭವ ಹೊಂದಿರಬೇಕು.

ಅಭ್ಯರ್ಥಿಗಳು ಉತ್ತಮವಾಗಿ ಕನ್ನಡ ಮತ್ತು ಇಂಗ್ಲೀಷ್ ಮಾತಾನಾಡುವ ಮತ್ತು ಬರೆಯುವ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ, ಟ್ಯಾಲಿ ತಂತ್ರಾಶ ಉಪಯೋಗಿಸುವ ಜ್ಞಾನ ಇತ್ಯಾದಿ ಕೌಶಲ್ಯಗಳನ್ನು ಹೊಂದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 16,000 ರೂ. ಗೌರವಧನ ನಿಗದಿ ಮಾಡಲಾಗಿದೆ. ಆಸಕ್ತು ಈ ಪ್ರಕಟಣೆ ಹೊರಡಿಸಿದ 7 ದಿನಗೊಳಗಾಗಿ ಅರ್ಜಿ ಸಲ್ಲಿಸಬೇಕು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕುವೆಂಪು ನಗರದ ಅಕ್ಷಯ ಭಂಡಾರ ವೃತ್ತದ ಬಳಿ ಇರುವ ಸಹಾಯಕ ಕಾರ್ಮಿಕರ ಆಯುಕ್ತರ ಕಚೇರಿ ಮತ್ತು ಬಾಲಕಾರ್ಮಿಕ ಯೋಜನಾ ಸೊಸೈಟಿ ಸಂಪರ್ಕಿಸಬಹುದಾಗಿದೆ.
ಆಸಕ್ತರು ಕರೆ ಮಾಡಲು ದೂರವಾಣಿ ಸಂಖ್ಯೆಗಳು 0821-2541942.












Click it and Unblock the Notifications