ಯಾದಗಿರಿಯಲ್ಲಿ ಕೆಲಸ ಖಾಲಿ ಇದೆ; ಬಿ. ಕಾಂ ಪದವೀಧರರು ಅರ್ಜಿ ಹಾಕಿ

ಯಾದಗಿರಿ, ಜನವರಿ 26; ಕರ್ನಾಟಕ ರಾಜ್ಯ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಕಛೇರಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿ ಬಿ. ಕಾಂ ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 11/2/2022 ಕೊನೆಯ ದಿನವಾಗಿದೆ.

ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ಲೆಕ್ಕಿಗರು-ಕಂ-ಕಛೇರಿ ಸಹಾಯಕ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಒಂದೇ ಹುದ್ದೆ ಇದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 14,641 ರೂ. ಮಾಸಿಕ ಗೌರವಧನ ನೀಡಲಾಗುತ್ತದೆ.

ಈ ಹುದ್ದೆಯನ್ನು ಒಂದು ವರ್ಷದ ಮಟ್ಟಿಗೆ ಮಾತ್ರ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅವಶ್ಯಕತೆ ಇದ್ದಲ್ಲಿ ಅಭ್ಯರ್ಥಿಯ ಕಾರ್ಯಕ್ಷಮತೆಯನ್ನು ಗಮನಿಸಿ ಸೇವೆಯನ್ನು ಮುಂದುವರೆಸಲು ಸಹ ಅವಕಾಶವಿದೆ.

Apply For Accountant Cum Office Assistant Post At Yadgiri

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 11/2/2022ರ ಸಂಜೆ 5 ಗಂಟೆಯ ತನಕ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಮೂಲಕ ಸಲ್ಲಿಕೆ ಮಾಡಿ ಅಥವ ನಂತರ ಬಂದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಬಿ. ಕಾಂ ಪದವಿ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನ (ಟ್ಯಾಲಿ, ಎಂ. ಎಸ್ ಆಫೀಸ್, ಎಂ. ಎಸ್. ಎಕ್ಸೆಲ್, ಇಂಟರ್ ನೆಟ್ ಬಳಕೆ) ಗೊತ್ತಿರಬೇಕು. ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲೀಶ್ ಟೈಪಿಂಗ್ ಗೊತ್ತಿರುವುದು ಕಡ್ಡಾಯ.

ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಲೆಕ್ಕಪತ್ರ ನಿರ್ವಹಣೆ, ಬ್ಯಾಂಕ್ ವ್ಯವಹಾರದಲ್ಲಿ ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲೆ ರಿಜಿಸ್ಟರ್‌ಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು.

ಕನ್ನಡ ಮತ್ತು ಇಂಗ್ಲೀಶ್ ಮಾತನಾಡುವ ಮತ್ತು ಬರೆಯುವ ಉತ್ತಮ ಶೈಲಿಯನ್ನು ಹೊಂದಿರಬೇಕು. ಅರ್ಜಿಯ ಜೊತೆ ಎಲ್ಲಾ ದಾಖಲೆಗಳನ್ನು ಕಡ್ಡಾಯವಾಗಿ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸುವುದು. ಅನುಭವ ಇದ್ದಲ್ಲಿ ಅನುಭವ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು.

ಅಭ್ಯರ್ಥಿಗಳು ಖುದ್ದಾಗಿ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಜ್ಞಾನ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?; ಅಭ್ಯರ್ಥಿಗಳು https://yadgir.nic.in/ ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ದೃಢೀಕೃತ ಎಲ್ಲಾ ದಾಖಲಾತಿಗಳೊಂದಿಗೆ ಖುದ್ದಾಗಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯನ್ನು ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನೆ, ಯೋಜನಾ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ ಎ-7, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ಯಾದಗಿರಿ, ಯಾದಗಿರಿ ಜಿಲ್ಲೆ ಇಲ್ಲಿಗೆ ಸಲ್ಲಿಸಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ ಅಥವ ದೂರವಾಣಿ ಸಂಖ್ಯೆ 08473-252345ಗೆ ಕರೆ ಮಾಡಬಹುದಾಗಿದೆ.

ಸಮುದಾಯ ಸಂಪನ್ಮೂಲ ವ್ಯಕ್ತಿ; ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.

ಒಟ್ಟು ಎರಡು ಹುದ್ದೆಗಳಿದ್ದು, ದ್ವಿತೀಯ ಪಿಯುಸಿ ಉತ್ತೀರ್ಣಗೊಂಡವರು ಅರ್ಜಿ ಸಲ್ಲಿಕೆ ಮಾಡಬಹುದು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ಇದೆ. ಮಾಸಿಕ ಗೌರವಧನ 8000 ರೂ. ಪ್ರಯಾಣ ಭತ್ಯೆ 2000 ರೂ. ತನಕ ನೀಡಲಾಗುತ್ತದೆ.

ಅಭ್ಯರ್ಥಿ ಕಂಪ್ಯೂಟರ್ ಜ್ಣಾನ ಹೊಂದಿರಬೇಕು (ಪ್ರಮಾಣ ಪತ್ರ ಪಡೆದಿರಬೇಕು.) ಪುರಸಭೆ ವ್ಯಾಪ್ತಿಯಲ್ಲಿ ಖಾಯಂ ನಿವಾಸಿಯಾಗಿದ್ದು ಕನಿಷ್ಟ 3 ವರ್ಷ ಸ್ವ-ಸಹಾಯಸಂಘದಲ್ಲಿ ಸದಸ್ಯರಾಗಿರಬೇಕು. ಯಾವುದೇ ಸರ್ಕಾರಿ / ಅರೆಸರ್ಕಾರಿ/ಎನ್.ಜಿ.ಓ ಗಳಲ್ಲಿ ಉದ್ಯೋಸ್ಥರಾಗಿರಬಾರದು. ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಹೊರ ಸಂಚಾರಕ್ಕೆ ಸಿದ್ದರಿರಬೇಕು.

ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು. ಕಡ್ಡಾಯವಾಗಿ ಮಹಿಳೆಯರಿಗೆ ಮಾತ್ರ ಅವಕಾಶ ನೀಡಲಾಗುವುದು. ಆಸಕ್ತ ಆಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪುರಸಭೆಯ ಕಚೇರಿ ಅವಧಿಯಲ್ಲಿ ಕಚೇರಿಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 2 ಕೊನೆಯ ದಿನ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+