ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಆ.10ರ ತನಕ ಅರ್ಜಿ ಹಾಕಿ

ಬೆಂಗಳೂರು, ಆಗಸ್ಟ್ 02: ದಾವಣಗೆರೆ ಜಿಲ್ಲಾ ಮಟ್ಟದಲ್ಲಿ ಹಣಕಾಸು ವ್ಯವಸ್ಥಾಪಕರನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ.

ನರೇಗಾ ಯೋಜನೆಯಡಿ ಸಂಬಂಧಿಸಿದ ಕೆಲಸ ನಿರ್ವಹಿಸಲು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.

ನರೇಗಾ ಯೋಜನೆಯ ಆದಾಯ ತೆರಿಗೆ ಪಾವತಿ, ಸರಕು ಮತ್ತು ಸೇವಾ ತೆರಿಗೆ ಪಾವತಿ, ರಾಜಧನ ಕಟಾವಣೆ ಹಾಗೂ ಪಾವತಿ, ವಾರ್ಷಿಕ ಲೆಕ್ಕಪತ್ರಗಳ ತಯಾರಿಕೆ ಮತ್ತು ನಿರ್ವಹಣೆ, ಹಣಕಾಸಿನ ವಿಷಯಕ್ಕೆ ಸಂಬಧಿಸಿದಂತೆ ವಿವಿಧ ಬ್ಯಾಂಕ್‍ಗಳ ಜೊತೆಗೆ ಸಮನ್ವಯ ಸಾಧಿಸಬೇಕು.

Apply For Accounts Manager Post In Davanagere

ಲೆಕ್ಕಪತ್ರ ಕಾರ್ಯಗಳನ್ನು ನಿರ್ವಹಿಸಲು ಹಾಗೂ ಮೇಲಿನ ವಿಷಯಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಸಹಕರಿಸಲು ಲೆಕ್ಕಪತ್ರ ವಿಷಯದಲ್ಲಿ ಅನುಭವವಿರುವ ಅಭ್ಯರ್ಥಿಗಳನ್ನು ಅಕೌಂಟ್ ಮ್ಯಾನೇಜರ್ ಆಗಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಆಯ್ಕೆಯಾದವರು ಜಿಲ್ಲಾ ಪಂಚಾಯತ್‍ ಕಚೇರಿಯಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು. ಅಭ್ಯರ್ಥಿಗಳು ಎ. ಕಾಂ, ಎಂ. ಬಿ. ಎ (ಫೈನಾನ್ಸ್) ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ 35 ವರ್ಷ ಮೀರಿರಬಾರದು. ಕನಿಷ್ಟ 2 ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 30,000 ರೂ. ನೀಡಲಾಗುತ್ತದೆ. ಪ್ರಯಾಣ ಭತ್ಯೆ ಭರಿಸಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ 1800-425-22-03 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಸುವ ವಿಳಾಸ, ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಜಿಲ್ಲಾ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+