ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 27 : ಧಾರವಾಡದ ಜಿಲ್ಲಾ ಮಟ್ಟದಲ್ಲಿ ಹಣಕಾಸು ವ್ಯವಸ್ಥಾಪಕರನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 10, 2020 ಕೊನೆಯ ದಿನವಾಗಿದೆ.

ನರೇಗಾ ಯೋಜನೆಯನ್ನು ಸಮರ್ಪವಾಗಿ ಅನುಷ್ಠಾನಗೊಳ್ಳಿಸಲು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಆದಾಯ ತೆರಿಗೆ, ಪಾವತಿ ಮತ್ತು ಸರಕು ಮತ್ತು ಸೇವಾ ತೆರಿಗೆ ಪಾವತಿ, ರಾಜಧನ ಮತ್ತು ಪಾವತಿ, ವಾರ್ಷಿಕ ಲೆಕ್ಕ ಪತ್ರಗಳ ತಯಾರಿಕೆ ಮತ್ತು ನಿರ್ವಹಣೆ ನೋಡಿಕೊಳ್ಳಬೇಕು.

ಈ ಎಲ್ಲಾ ಕೆಲಸಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಹಣಕಾಸು ವ್ಯವಸ್ಥಾಪಕರನ್ನು ಆಯ್ಕೆ ಮಾಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Apply For Accounts Manager Post In Dharwad

ಅಭ್ಯರ್ಥಿಗಳು ಜುಲೈ 27 ರಿಂದ ಆಗಸ್ಟ್ 10ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತರು ಅರ್ಜಿಗಳನ್ನು ಜಿಲ್ಲಾ ಪಂಚಾಯತ್ ಧಾರವಾಡ ವೆಬ್ ಸೈಟ್ ಮತ್ತು ಧಾರವಾಡ ಜಿಲ್ಲಾ ವೆಬ್ ಸೈಟ್ ಮುಖಾಂತರ ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಂ.ಕಾಂ ಅಥವಾ ಎಂಬಿಎ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಮತ್ತು 35 ವರ್ಷದ ವಯೋಮಿತಿ ಮೀರಿರಬಾರದು. ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರಬೇಕು.

ಹೊರಗುತ್ತಿದೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾ ಪಂಚಾಯತಿ ದೂರವಾಣಿ ಸಂಖ್ಯೆ 0836-2443322 ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+