• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೀದರ್; ಬಿಕಾಂ ಪದವೀಧರರಿಗೆ ಕೆಲಸ ಖಾಲಿ ಇದೆ, 8 ಹುದ್ದೆಗಳು

|
Google Oneindia Kannada News

ಬೀದರ್, ಸೆಪ್ಟೆಂಬರ್ 03; ಬೀದರ್ ಜಿಲ್ಲೆಯಲ್ಲಿ administrative assistant ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 24/9/2021 ಕೊನೆಯ ದಿನವಾಗಿದೆ.

ಬೀದರ್ ಜಿಲ್ಲಾ ಪಂಚಾಯಿತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆಯಡಿ ಖಾಲಿ ಇರುವ administrative assistant ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 8.

ಉದ್ಯೋಗ ಮಾಹಿತಿ; ಹಾಸನ, ಮೈಸೂರು, ಯಾದಗಿರಿಯಲ್ಲಿ ಕೆಲಸ ಉದ್ಯೋಗ ಮಾಹಿತಿ; ಹಾಸನ, ಮೈಸೂರು, ಯಾದಗಿರಿಯಲ್ಲಿ ಕೆಲಸ

ಅರ್ಜಿಗಳನ್ನು ಸಲ್ಲಿಸುವವರು ಬಿ.ಕಾಂ ವಿಷಯದಲ್ಲಿ ಕನಿಷ್ಠ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಕನ್ನಡ ಮತ್ತು ಇಂಗ್ಲೀಶ್ ಟೈಪಿಂಗ್ ಪರಿಣಿತಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಎಂಎಸ್ ವರ್ಡ್, ಎಕ್ಸೆಲ್, ಪವರ್ ಪಾಯಿಂಟ್ ಬಗ್ಗೆ ಜ್ಞಾನ ಹೊಂದಿರಬೇಕು.

ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ

ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 40 ವರ್ಷಗಳನ್ನು ಮೀರಿರಬಾರದು. ಈ ಹುದ್ದೆ ಸಂಪೂರ್ಣ ತಾತ್ಕಾಲಿಕವಾಗಿದ್ದು. 11 ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನಂತರ ಕಾರ್ಯ ಕ್ಷಮತೆ ಪರಿಶೀಲನೆ ಮಾಡಿ ಅಗತ್ಯವಿದ್ದರೆ ನವೀಕರಿಸಲಾಗುತ್ತದೆ.

ಬಿಬಿಎಂಪಿಯಲ್ಲಿ ವಾಕ್ ಇನ್ ಸಂದರ್ಶನ; 420 ಹುದ್ದೆಗಳು ಬಿಬಿಎಂಪಿಯಲ್ಲಿ ವಾಕ್ ಇನ್ ಸಂದರ್ಶನ; 420 ಹುದ್ದೆಗಳು

ಕಾರ್ಮಿಕ ಇಲಾಖೆಯ ತಾಲೂಕು ಮಟ್ಟದಲ್ಲಿ ಡೆಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ಮಾಸಿಕ ಸಂಭಾವನೆಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಪದವಿ/ ಸ್ನಾತಕೋತ್ತರ ಪದವಿಯನ್ನು ದೂರ ಶಿಕ್ಷಣದ ಮೂಲಕ ಪಡೆದಿದ್ದರೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನೇಮಕಾತಿಯಾದ ಬಳಿಕ ಅಭ್ಯರ್ಥಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ನೇಮಿಸಿದ ಸ್ಥಳದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು. ಸೆಪ್ಟೆಂಬರ್ 6ರಿಂದ 24ರ ತನಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಬೀದರ್ ಜಿಲ್ಲಾ ಪಂಚಾಯಿತಿಯ ನರೇಗಾ ಶಾಖೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರ ಒಳಗೆ (ರಜೆ ದಿನಗಳನ್ನು ಹೊರತುಪಡಿಸಿ) ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08482-233117 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Bidar zilla panchayat invited applications for administrative assistant post. Candidates can apply till September 14, 2021. ಬೀದರ್ ಜಿಲ್ಲೆಯಲ್ಲಿ administrative assistant
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X