ತುಮಕೂರಿನಲ್ಲಿ ಕೆಲಸ ಖಾಲಿ ಇದೆ; ಮಾ.31ರೊಳಗೆ ಅರ್ಜಿ ಹಾಕಿ
ತುಮಕೂರು, ಮಾರ್ಚ್ 16: ಜಿಲ್ಲಾ ಪಂಚಾಯಿತಿ ಕಾರ್ಯಾಲಯ ತುಮಕೂರು ನರೇಗಾ ಯೋಜನೆಯಡಿ ತಾಲೂಕು ಪಂಚಾಯಿತಿಗೆ ತಲಾ ಒಬ್ಬರು ಆಡಳಿತ ಸಹಾಯಕರನ್ನು ನೇಮಕ ಮಾಡುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ತುಮಕೂರು ಜಿಲ್ಲೆಯ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ತಾಲೂಕು ಪಂಚಾಯಿತಿಗಳಿಗೆ ತಲಾ ಒಬ್ಬರು administrative assistant ನೇಮಕಾತಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಹೊರಗುತ್ತಿಗೆ ಸಂಸ್ಥೆಯಾದ ಮೆ. ಇನ್‌ವೆನ್ಸಿವ್ ಟೆಕ್ನಾಲಜೀಸ್ ಪ್ರವೇಟ್ ಲಿಮಿಟೆಡ್, ಬೆಂಗಳೂರು ಇವರಿಂದ ಈ ಹುದ್ದೆಗಳ ಭರ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುತ್ತದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯಾಗಿ ಬಿ.ಕಾಂ ಪದವಿ ಪಡೆದಿರಬೇಕು.
ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಶ್ ಟೈಪಿಂಗ್ ಪರಿಣಿತಿ ಹೊಂದಿರಬೇಕು. ಎಂಎಸ್ ವರ್ಡ್, ಎಕ್ಸೆಲ್, ಪಿಪಿಟಿ ಸೇರಿದಂತೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯವಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಗಳು. (ಅರ್ಜಿ ಸಲ್ಲಿಸುವ ಅಭ್ಯರ್ಥಿ 31/3/2022ಕ್ಕೆ 45 ವರ್ಷ ಮೀರರಬಾರದು).
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಛಾಯಾ ಚಿತ್ರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್‌ಲೋಡ್ ಮಾಡಬೇಕು.
ಆಯ್ಕೆ ಹೇಗೆ?; ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಮೆರಿಟ್ ಪಟ್ಟಿ ತಯಾರು ಮಾಡಿ, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ಮೂಲಕ ಮಾನವ ಸಂಪನ್ಮೂಲ ಸಂಸ್ಥೆ ಮೂಲಕ ಸೇವೆಯನ್ನು ಪಡೆಯಲಾಗುವುದು.
ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ
ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ದಾವಣಗೆರೆ ಜಿಲ್ಲೆಯಲ್ಲಿ ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಲೆಬೆನ್ನೂರು, ಹೊನ್ನಾಳಿ ಪುರಸಭೆ ಮತ್ತು ನ್ಯಾಮತಿ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೊಮಾ ಪದವಿ ಪಡೆದಿರಬೇಕು. ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಉತ್ತಮ ಜ್ಞಾನವುಳ್ಳವರಾಗಿರಬೇಕು. ಈ ಹುದ್ದೆಯನ್ನು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅಭ್ಯರ್ಥಿಯು ತೃಪ್ತಿದಾಯಕವಾಗಿ ಕಾರ್ಯ ಪೂರೈಸಿದಲ್ಲಿ ಅವರ ಸೇವೆಯನ್ನು ಮುಂದಿನ ವರ್ಷಕ್ಕೆ ವಿಸ್ತರಿಸಲಾಗುವುದು. ಅಭ್ಯರ್ಥಿಗಳು, ಜನನ ಪ್ರಮಾಣ ಪತ್ರ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಪ್ರಮಾಣ ಪತ್ರಗಳ ಪ್ರತಿಗಳನ್ನು ಹಾಗೂ ಒಂದು ಭಾವಚಿತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಸರ್ಕಾರಿ ವಲಯದಲ್ಲಿ ಕನ್ಸಲ್‍ಟೆಂಟ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸಿ (ವಸ್ತುನಿಷ್ಟ ಪರೀಕ್ಷೆ) ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆಸಕ್ತರು ಅರ್ಜಿ ನಮೂನೆಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 22, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇದೇ ಕಚೇರಿಗೆ ಮಾರ್ಚ್ 31ರ ಸಂಜೆ 5.30ರೊಳಗಾಗಿ ಸಲ್ಲಿಸಬೇಕು.
ಮಾರ್ಚ್ 19ರಂದು ಉದ್ಯೋಗ ಮೇಳ; ವಿಕಲಚೇತನರ ಸಬಲೀಕರಣಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ ಸಮರ್ಥನಂ ಸಂಸ್ಥೆ, ಬೆಂಗಳೂರು ವಿಕಲಚೇತನರಿಗೆ ಮಾರ್ಚ್ 19 ರಂದು ಬೆಳಗ್ಗೆ 9 ಗಂಟೆಗೆ ಮೈಸೂರಿನ ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಿದೆ.
ಜಿಲ್ಲೆಯ ವಿಕಲಚೇತನರು ಈ ಉದ್ಯೋಗಮೇಳದಲ್ಲಿ ಭಾಗವಹಿಸಿ ಉದ್ಯೋಗ ದೊರಕಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ವೀರಭದ್ರ ಪಾಟೀಲ್ 9480812121 ಹಾಗೂ ಸುಭಾಷ್ 9449864693 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











Click it and Unblock the Notifications