ಸಖಿ ಯೋಜನೆಯಡಿ ಹುದ್ದೆ ಭರ್ತಿ, ಏಪ್ರಿಲ್ 4ರೊಳಗೆ ಅರ್ಜಿ ಹಾಕಿ

ಬೆಂಗಳೂರು ನಗರ ಜಿಲ್ಲೆಯಲ್ಲಿ ಸಖಿ (ಒನ್ ಸ್ಟಾಪ್ ಸೆಂಟರ್) ಯೋಜನೆಯಡಿಯಲ್ಲಿ ಆಡಳಿತಾಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು, ಮಾರ್ಚ್ 20; ಬೆಂಗಳೂರು ನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಖಿ (ಒನ್ ಸ್ಟಾಪ್ ಸೆಂಟರ್) ಯೋಜನೆಯಡಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಿತಿಯವರಾಗಿರಬೇಕು.

ಹೊರಗುತ್ತಿಗೆ ಆಧಾರದ ಮೇಲೆ ಘಟಕ ಆಡಳಿತಾಧಿಕಾರಿ (1 ಹುದ್ದೆ)ಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಡುವವರು ಸ್ಥಳೀಯ ಭಾಷೆ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಗೂಗಲ್ ಶೀಟ್, MS Office ಹಾಗೂ ಪಿಪಿಟಿಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

Apply For Administrator Post At Bengaluru Urban District

ಅಭ್ಯರ್ಥಿಯು ಎಂ.ಎಸ್. ಡಬ್ಲ್ಯೂ/ ಸ್ನಾತಕೋತ್ತರ ಕಾನೂನು ಪದವಿ/ ಎಂ.ಎಸ್ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವಲಪ್ ಮೆಂಟ್ ಮತ್ತು ಫ್ಯಾಮಿಲಿ ರಿಲೇಶನ್) ಎಂ.ಎಸ್ಸಿ ಸೈಕಾಲಜಿ/ ಎಂ.ಎಸ್ಸಿ ಸೈಕ್ರಿಯಾಟ್ರಿ ಪದವೀಧರರಾಗಿರಬೇಕು. ಸರ್ಕಾರಿ ಸ್ವಯಂ ಸೇವಾಸಂಸ್ಥೆಗಳಲ್ಲಿ ಕನಿಷ್ಠ 5 ವರ್ಷಗಳ ಸಮಾಲೋಚನ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ/ ಇಂಗ್ಲಿಷ್ ಬೆರಳಚ್ಚು ಜ್ಞಾನ ಇರಬೇಕು.

ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 4ರೊಳಗೆ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ. ಹೆಚ್. ಮರಿಗೌಡ ರಸ್ತೆ, ಬೆಂಗಳೂರು ನಗರ ಜಿಲ್ಲೆ- 560029 ಇಲ್ಲಿಗೆ ತಮ್ಮ ರೆಸ್ಯೂಮ್, ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.

Apply For Administrator Post At Bengaluru Urban District

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29578688ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಹೆಚ್‍ಇಓ ಹುದ್ದೆಗೆ ಅರ್ಜಿ ಆಹ್ವಾನ; ಶಿವಮೊಗ್ಗ ಜಿಲ್ಲಾ ತರಬೇತಿ ಕೇಂದ್ರ (ಆರೋಗ್ಯ) ಇಲ್ಲಿಗೆ ಆರೋಗ್ಯ ಶಿಕ್ಷಣಾಧಿಕಾರಿ (ಹೆಚ್‍ಇಓ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ. ಅಭ್ಯರ್ಥಿಯ ವಯಸ್ಸು 60 ರಿಂದ 65 ವರ್ಷಗಳ ಒಳಗಿದ್ದು, ಹಿರಿಯ ಆರೋಗ್ಯ ಸಹಾಯಕರು ಅಥವಾ ಇನ್ನೂ ಹೆಚ್ಚಿನ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿರುವವರು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ನಿರ್ವಹಿಸಿದ ಹಾಗೂ ತರಬೇತಿ ನೀಡಿದ ಅನುಭವ ಮತ್ತು ಸಾಮರ್ಥ್ಯ ಇರುವವರು ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ಜಿಲ್ಲಾ ತರಬೇತಿ ಕೇಂದ್ರ (ಆರೋಗ್ಯ), ಶಿವಮೊಗ್ಗ ಇಲ್ಲಿಗೆ ಪಡೆದು 3/4/2023ರೊಳಗೆ ಸಲ್ಲಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+