ಚಿಕ್ಕಮಗಳೂರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ ಇದೆ

ಬೆಂಗಳೂರು, ಆಗಸ್ಟ್ 14 : ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31, 2018.

ಜಿಲ್ಲಾ ಪಂಚಾಯತ್ ಚಿಕ್ಕಮಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 19 ಅಂಗನವಾಡಿ ಕಾರ್ಯಕರ್ತೆ, 77 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

18 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ 45 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಅದೇ
ಗ್ರಾಮದವರಾಗಿರಬೇಕು.

Apply for Anganwadi Worker and assistant post Chikkamagaluru

ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯಾಗಲು ಎಲ್ಲಾ ದಾಖಲೆಗಳ ಸಮೇತ 31/8/2018ರ ಸಂಜೆ 5.30ರೊಳಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಆದೇಶ ಪ್ರತಿ, ಹೆಚ್ಚಿನ ವಿವರ, ಅರ್ಜಿ ಸಲ್ಲಿಸುವ ವಿಳಾಸ ಇಲ್ಲಿದೆ

ಗ್ರಾಮ ಲೆಕ್ಕಿಗ ಹುದ್ದೆಗಳು : ಚಿಕ್ಕಮಗಳೂರಿನಲ್ಲಿ ಖಾಲಿ ಇರುವ 45 ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಅಥವ ಸಿಬಿಎಸ್‌ಸಿ ಅಥವ ಐಸಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 29, 2018.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+