ಶಿವಮೊಗ್ಗ : 25 ಅಂಗನವಾಡಿ ಸಹಾಯಕಿ, 60 ಕಾರ್ಯಕರ್ತೆ ಹುದ್ದೆ ಖಾಲಿ ಇದೆ
ಬೆಂಗಳೂರು, ಆಗಸ್ಟ್ 19 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 25/8/2018.
ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲ್ಲಿ ಖಾಲಿ ಇರುವ 25 ಅಂಗನವಾಡಿ ಕಾರ್ಯಕರ್ತೆ ಮತ್ತು 60 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸಲು 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ (ಕಾರ್ಯಕರ್ತೆ) 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅದೇ ಗ್ರಾಮ, ಅದೇ ವಾರ್ಡ್‌ನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.
ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ದಾಖಲಾತಿಗಳೊಂದಿಗೆ 25/8/2018ರ ಸಂಜೆ 5.30ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಿದೆ.
ಅರ್ಜಿ ಸಲ್ಲಿಸಲು, ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications