ಯಾದಗಿರಿ : 13 ಅಂಗನಾಡಿ ಕಾರ್ಯಕರ್ತೆ, 35 ಸಹಾಯಕಿ ಹುದ್ದೆ ಖಾಲಿ ಇದೆ
ಬೆಂಗಳೂರು, ಆಗಸ್ಟ್ 20 : ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ, ಕಾರ್ಯಕರ್ತೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
13 ಅಂಗನವಾಡಿ ಕಾರ್ಯಕರ್ತೆ ಮತ್ತು 35 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 3/9/2018 ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗವಿಕಲರಾಗಿದ್ದಲ್ಲಿ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಉರ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು 4ನೇ ತರಗತಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆ ಪರಿಗಣಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು ಕಾರ್ಯಕರ್ತೆ ಅಥವ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದರೆ. ಇತರ ಎಲ್ಲಾ ಅರ್ಜಿಗಳನ್ನು ಪರಿಗಣಿಸದೇ ಆದ್ಯತೆ ಮೇಲೆ ಅವರನ್ನು ನೇರವಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು, ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications