ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಅಕ್ಟೋಬರ್ 08 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಉತ್ತರ ತಾಲ್ಲೂಕು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಹಾಗೂ ಸುಮಂಗಲಿ ಸೇವಾಶ್ರಮದಿಂದ ಹೆಚ್ಚುವರಿಯಾಗಿ ಸೇರಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳು ತಾತ್ಕಾಲಿಕವಾಗಿದ್ದು, ಗೌರವಧನದ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. [ದೂರದರ್ಶನ ಕೇಂದ್ರದಲ್ಲಿ ಕೆಲಸ ಖಾಲಿ ಇದೆ]

ಅರ್ಹತೆ : ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 13, 2015. [ಕೊಪ್ಪಳ ನ್ಯಾಯಾಲಯದಲ್ಲಿ 12 ಹುದ್ದೆಗಳು ಖಾಲಿ ಇವೆ]
ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, # 2023, ಹೆಚ್.ಐ.ಜಿ., 3ನೇ ಹಂತ, ಯಲಹಂಕ ಉಪನಗರ, ಪೊಲೀಸ್ ಠಾಣೆಯ ಹತ್ತಿರ, ಯಲಹಂಕ ಉಪನಗರ, ಬೆಂಗಳೂರು 560064 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-28462513.












Click it and Unblock the Notifications