ಕಲಬುರಗಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ ಇದೆ

Posted By:
Subscribe to Oneindia Kannada

ಕಲಬುರಗಿ, ಜೂನ್ 16 : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 5 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 27 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15, 2016.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. [BMRCL ನೇಮಕಾತಿ ವಿವರಗಳು]

job

18 ರಿಂದ 35 ವರ್ಷದೊಳಗಿನವರು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಂಗನವಾಡಿ ಸಹಾಯಕಿಯರ ಹುದ್ದೆಗೆ ವಿಧವೆಯರನ್ನ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿಧವೆಯರು ಮತ್ತು ಅಂಗವಿಕಲರಿಗೆ ಆದ್ಯತೆ ನೀಡಲಾಗುತ್ತದೆ. [KPSC ನೇಮಕಾತಿ ವಿವರಗಳನ್ನು ನೋಡಿ]

ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಜುಲೈ 14ರೊಳಗೆ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಮೀಸಲಾತಿ ವಿವರ, ಅರ್ಹತೆ, ಮಾನದಂಡಗಳ ಕುರಿತ ಮಾಹಿತಿ ಸಂಬಂಧಪಟ್ಟ ಅಂಗನವಾಡಿ ಕೇಂದ್ರದ ವ್ಯಾಪ್ತಿಯ ಕೃಷಿ ಸಂಪರ್ಕ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆಯಲ್ಲಿ, ಗ್ರಾಮ ಲೆಕ್ಕಿಗರ ಕಚೇರಿ, ಅಂಗನವಾಡಿ ಕೇಂದ್ರ ಮತ್ತು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಲಭ್ಯವಿದೆ.

ಅರ್ಜಿ ಆಹ್ವಾನ : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಖಾಲಿಯಿರುವ 9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 21 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸೇಡಂ ಇವರಿಗೆ ಜುಲೈ 15 ರೊಳಗಾಗಿ ಸಲ್ಲಿಸಬೇಕು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Apply for Anganwadi worker and Assistant posts in Kalaburagi district Chittapur and Sedam taluk. July 15 last date for submit application.
Please Wait while comments are loading...