ರಾಮನಗರ : 164 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ರಾಮನಗರ, ಅಕ್ಟೋಬರ್ 22 : ರಾಮನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 31/10/2018 ಕೊನೆಯ ದಿನವಾಗಿದೆ.
ಒಟ್ಟು 55 ಅಂಗನವಾಡಿ ಕಾರ್ಯಕರ್ತೆ ಮತ್ತು 109 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು ಹುದ್ದೆಗೆಳು 164. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆ ಗ್ರಾಮಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹಿಂದೆ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4, ಗರಿಷ್ಠ 9ನೇ ತರಗತಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.
ಆಸಕ್ತರು 31/10/2018ರ ಸಂಜೆ 5.30ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ವಿಳಾಸ
ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications