ಬೆಂಗಳೂರು; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಹಾಕಿ
ಬೆಂಗಳೂರು, ಜುಲೈ 05; ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 4 ರೊಳಗೆ ಅರ್ಜಿ ಸಲ್ಲಿಸಬಹುದು.
2022-23ನೇ ಸಾಲಿನ ಶಿಶು ಅಭಿವೃದ್ಧಿ ಯೋಜನೆ ಬೆಂಗಳೂರು ಕೇಂದ್ರ ಇಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮಹಿಳೆಯರು ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಇಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 080-23204490/ 9901074633.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ಕೇಂದ್ರ ಯೋಜನೆ. 3ನೇ ಕ್ರಾಸ್, ಕಬ್ಬಡಿ ಕ್ರೀಡಾಂಗಣ ಹತ್ತಿರ, ಬಿ.ಬಿ.ಎಂ.ಪಿ ಕಟ್ಟಡ, ಮೊದಲನೇ ಮಹಡಿ, ಗೋವಿಂದರಾಜನಗರ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು.
ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ; ಚಿತ್ರದುರ್ಗ ವಿದ್ಯಾ ಸಂಸ್ಥೆಯವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಲಿತೊಟ್ಟಿಲು ಗ್ರಾಮದಲ್ಲಿ ನಡೆಸುತ್ತಿರುವ ಶ್ರೀ ಕಾಲಭೈರವ ವಸತಿ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಕರೆದಿದ್ದಾರೆ.
ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ, ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಜುಲೈ 13 ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-220925 ಅನ್ನು ಸಂಪರ್ಕಿಸುವುದು.
ತರಬೇತಿ ಶಿಬಿರ; ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಜುಲೈ 10 ಮತ್ತು 11 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ತರಬೇಕು.
ಈ ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-233787.












Click it and Unblock the Notifications