ಬಿಎಚ್‌ಇಎಲ್‌ನಲ್ಲಿ 529 ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 03 : ಬಿಎಚ್‌ಇಎಲ್ 529 ಅಪ್ರೇಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 13, 2018 ಕೊನೆಯ ದಿನವಾಗಿದೆ.
ಭಾರತ್ ಹೆವಿ ಎಲಿಕ್ಟ್ರಿಕಲ್ ಲಿಮಿಟೆಡ್ (ಬಿಎಚ್‌ಇಎಲ್) ಫಿಟ್ಟರ್ 2, ವೆಲ್ಡರ್ 115, ಟರ್ನರ್ 28, ಎಲೆಕ್ಟ್ರಿಶಿಯನ್ 40, ಡೀಸೆಲ್ ಮೆಕಾನಿಕ್ 15, ಕಾರ್ಪೆಂಟರ್ 10 ಸೇರಿದಂತೆ 529 ಅಪ್ರೇಂಟಿಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಕೆಲಸದ ಸ್ಥಳ ತಿರುಚ್ಚಿ, ತಮಿಳುನಾಡು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಐಟಿಐ, 12ನೇ ತರಗತಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications