ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಚ್‌ಇಎಲ್‌ನಲ್ಲಿ 529 ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

By Gururaj
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 03 : ಬಿಎಚ್‌ಇಎಲ್‌ 529 ಅಪ್ರೇಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 13, 2018 ಕೊನೆಯ ದಿನವಾಗಿದೆ.

ಬೆಂಗಳೂರು: ಕೋರ್ಟಿನಲ್ಲಿ ಎಸ್ಎಸ್ಎಲ್ಸಿ ಪಾಸಾದವರಿಗೆ ಉದ್ಯೋಗಬೆಂಗಳೂರು: ಕೋರ್ಟಿನಲ್ಲಿ ಎಸ್ಎಸ್ಎಲ್ಸಿ ಪಾಸಾದವರಿಗೆ ಉದ್ಯೋಗ

ಭಾರತ್ ಹೆವಿ ಎಲಿಕ್ಟ್ರಿಕಲ್ ಲಿಮಿಟೆಡ್ (ಬಿಎಚ್‌ಇಎಲ್) ಫಿಟ್ಟರ್ 2, ವೆಲ್ಡರ್ 115, ಟರ್ನರ್ 28, ಎಲೆಕ್ಟ್ರಿಶಿಯನ್ 40, ಡೀಸೆಲ್ ಮೆಕಾನಿಕ್ 15, ಕಾರ್ಪೆಂಟರ್ 10 ಸೇರಿದಂತೆ 529 ಅಪ್ರೇಂಟಿಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಕೆಲಸದ ಸ್ಥಳ ತಿರುಚ್ಚಿ, ತಮಿಳುನಾಡು.

ಮಂಡ್ಯದಲ್ಲಿ ಅಕ್ಟೋಬರ್‌ನಲ್ಲಿ ಸೇನಾ ನೇಮಕಾತಿ ಮಂಡ್ಯದಲ್ಲಿ ಅಕ್ಟೋಬರ್‌ನಲ್ಲಿ ಸೇನಾ ನೇಮಕಾತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಐಟಿಐ, 12ನೇ ತರಗತಿಯಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

Apply for apprentices jobs in BHEL

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Bharat Heavy Electricals Limited (BHEL) has released a new recruitment notification for the posts of 529 apprentices. 13th September 2018 last date to submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X