ಧಾರವಾಡ; ಟಾಟಾ ಮೋಟಾರ್ಸ್‌ನಲ್ಲಿ ಕೆಲಸ ಖಾಲಿ ಇದೆ
ಧಾರವಾಡ, ಮೇ 20: ಟಾಟಾ ಮೋಟಾರ್ಸ್ ಲಿಮಿಟೆಡ್, ಧಾರವಾಡ ಫುಲ್ ಟರ್ಮ್ ಅಪ್ರೆಂಟಿಶಿಪ್‌ಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 13,000 ಸ್ಟೈಫಂಡ್ ನೀಡಲಾಗುತ್ತದೆ.
ಪಿಯುಸಿ/ 12ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಫಂಡ್, ಉಚಿತ ಸಮವಸ್ತ್ರ, ಪಿಪಿಇಗಳನ್ನು ನೀಡಲಾಗುತ್ತದೆ. ಕಂಪನಿಯ ನಿಯಮದ ಪ್ರಕಾರ ಸಬ್ಸಿಡಿ, ಕ್ಯಾಂಟೀನ್ ಮತ್ತು ಸಾರಿಗೆ ಸೌಲಭ್ಯಗಳು ಲಭ್ಯವಿರುತ್ತದೆ.

ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದೆ.
ನೇಮಕಾತಿ ವಿವರಗಳು; ಅರ್ಜಿ ಸಲ್ಲಿಸಿದ ದಿನಾಂಕದಂದು ಅಭ್ಯರ್ಥಿಗಳಿಗೆ ವಯಸ್ಸು 16 ರಿಂದ 20 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷಗಳ ಸಡಿಲಿಕೆ ಇರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳು ಅಪ್ರೆಂಟಿಸ್‌ಶಿಪ್ ಕಾಯಿದೆ 1961ರ ಪ್ರಕಾರ ಮೆಕ್ಯಾನಿಕ್ ಆಟೋ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಟ್ರೇಡ್‌ನಲ್ಲಿ 2 ವರ್ಷಗಳವರೆಗೆ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪಡೆಯಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪ್ರಸಕ್ತ ವರ್ಷ 2024ರಲ್ಲಿ ಪಿಯುಸಿ/ 12ನೇ ತರಗತಿ (ಸೈನ್ಸ್) ತೇರ್ಗಡೆ (ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾದವರಿಗೆ ಮಾತ್ರ). ಎಸ್‌ಎಸ್ಎಲ್‌ಸಿ ಮತ್ತು ಪಿಯುಸಿ ನಡುವೆ ಯಾವುದೇ ವರ್ಷದ ಅಂತರ ಇರಬಾರದು.
ಎಸ್‌ಎಸ್‌ಎಲ್‌ಸಿ/ 10ನೇ ತರಗತಿಯನ್ನು 1ನೇ ಪ್ರಯತ್ನದಲ್ಲಿ ಮಾತ್ರ ನಿಯಮಿತ ಆಧಾರದ ಮೇಲೆ ಉತ್ತೀರ್ಣರಾಗಬೇಕು. ಸಾಮಾನ್ಯ/ ಒಬಿಸಿ ವರ್ಗ ಕನಿಷ್ಠ 70 ಅಂಕಗಳೊಂದಿಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣನಾಗಿರಬೇಕು.
ಎಸ್‌ಸಿ/ಎಸ್‌ಟಿ ವರ್ಗ ಕನಿಷ್ಠ ಶೇ 60 ಅಂಕಗಳೊಂದಿಗೆ ಎಸ್‌ಎಸ್‌ಎಲ್‌ಸಿ ಉತ್ತಿರ್ಣನಾಗಿರಬೇಕು. ಎಸ್‌ಎಸ್‌ಎಲ್‌ಸಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿನ ಅಂಕಗಳು ಎಲ್ಲಾ ವರ್ಗಗಳಿಗೆ ಕನಿಷ್ಠ ಶೇ 70 ಆಗಿರಬೇಕು. ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 8431872105, 7022871540 ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ.
ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಹಾಕಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ವಿವಿಧ ತರಬೇತಿಯನ್ನು ನೀಡಲಾಗುತ್ತದೆ. ಇದಕ್ಕಾಗಿ ಕೌಶಲ್‍ಕರ್ ಪೋರ್ಟಲ್ ಮೂಲಕ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳಾಗಿರಬೇಕು. ಕೌಶಲ್‍ಕರ್ ಪೋರ್ಟಲ್‍ನಲ್ಲಿ ಮಾತ್ರ ಹೆಸರು ನೋಂದಾಯಿಸಿಕೊಳ್ಳಬೇಕು. ಪೋರ್ಟಲ್‍ನಲ್ಲಿ ಹಲವಾರು ಜಾಬ್‍ರೋಲ್‍ಗಳಿದ್ದು, ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನು ನಮೂದಿಸಬೇಕು.
ಅಭ್ಯರ್ಥಿಗಳು http://www.kaushalkar.com ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಂಡು ತರಬೇತಿ ಪಡೆಯಬಹುದು. ತರಬೇತಿ ಪೂರ್ಣಗೊಂಡ ನಂತರ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ.












Click it and Unblock the Notifications