ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಮಾಧ್ಯಮ ಅಕಾಡೆಮಿ ಅಪ್ರೆಂಟಿಸ್ ತರಬೇತಿ; ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ನವೆಂಬರ್ 08: ಕರ್ನಾಟಕ ಮಾಧ್ಯಮ ಅಕಾಡೆಮಿ ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಆಯೋಜಿಸಿದೆ. ಆಸಕ್ತ ಅಭ್ಯರ್ಥಿಗಳು 27-11-2020ರೊಳಗೆ ತಲುಪುವಂತೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಬಿಎಂಸಿಆರ್‌ಐ ನೇಮಕಾತಿ; 100 ಹುದ್ದೆಗೆ ನೇರ ಸಂದರ್ಶನ ಬಿಎಂಸಿಆರ್‌ಐ ನೇಮಕಾತಿ; 100 ಹುದ್ದೆಗೆ ನೇರ ಸಂದರ್ಶನ

ಪರಿಶಿಷ್ಟ ಜಾತಿಯ 25 ಮಂದಿ ಹಾಗೂ ಪರಿಶಿಷ್ಟ ಪಂಗಡದ 10 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯ / ವಾಹಿನಿಗಳಲ್ಲಿ ತರಬೇತಿ ನೀಡಿ ಮಾಸಿಕ ರೂ. 15,000 ರೂ.ಗಳ ಸ್ಟೈಫಂಡ್ ನೀಡಲಾಗುತ್ತದೆ.

ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್ ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್

Apply For Apprenticeship Course By Karnataka Madhyama Academy

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಕೋಲಾರ; ಖಾಸಗಿ ಕಂಪನಿಗಳಲ್ಲಿ 5000 ನೇಮಕಾತಿ ಕೋಲಾರ; ಖಾಸಗಿ ಕಂಪನಿಗಳಲ್ಲಿ 5000 ನೇಮಕಾತಿ

ಅಭ್ಯರ್ಥಿಗಳು ಅರ್ಜಿಯ ಜೊತೆ ಎಸ್. ಎಸ್. ಎಲ್. ಸಿ. ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸ್ಕ್ಯಾನ್ ಮಾಡಿ [email protected] ವಿಳಾಸ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಕ್ರಿಮಿನಲ್ ಪ್ರಕರಣ ದಾಖಲು ಮಾಡಲಾಗುತ್ತದೆ.

Recommended Video

ಎಷ್ಟ್ ದಿನ ಮೋಸ ಮಾಡ್ತಾರೋ ಮಾಡ್ಲಿ!! | Oneindia Kannada

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ.

English summary
Karnataka Madhyama Academy invited applications for the apprenticeship. The Scheduled Caste (SC) and Scheduled Tribes (ST) candidates can apply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X