ಜೆಸ್ಕಾಂ ಅಪ್ರೆಂಟಿಸ್ ತರಬೇತಿ; ಮಾರ್ಚ್ 18ರೊಳಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 01: ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 18/3/2021 ಕೊನೆಯ ದಿನವಾಗಿದೆ.

ರಾಷ್ಟ್ರೀಯ ಶಿಶಿಕ್ಷು ಯೋಜನೆಯಡಿ ಎನ್‌ಸಿವಿಟಿ ಪ್ರಮಾಣ ಪತ್ರ ಪಡೆದವರಿಗೆ ಒಂದು ವರ್ಷದ ಅವಧಿಯ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ ತರಬೇತಿ ನೀಡಲಾಗುತ್ತದೆ.

ರಾಜ್ಯ ವೃತ್ತಿ ಪ್ರಮಾಣ ಪತ್ರ/ಅಂಕಪಟ್ಟಿ ಪಡೆದವರಿಗೆ 1 ವರ್ಷದ ಅವಧಿಯ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ ತರಬೇತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Apply For Apprenticeship Post At GESCOM

ಅರ್ಜಿಗಳನ್ನು ಸಲ್ಲಿಸುವ ವಯಸ್ಸು 26/2/2021ಕ್ಕೆ 16 ವರ್ಷ ಮೇಲ್ಪಟ್ಟು ದಿನಾಂಕ 18/3/2021ಕ್ಕೆ 25 ವರ್ಷಕ್ಕಿಂತ ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳು ಮೀರಿರಬಾರದು. ಎಸ್‌ಸಿ/ ಎಸ್‌ಟಿ ಪಂಗಡದ ಅಭ್ಯರ್ಥಿಗಳ ವಯಸ್ಸು 18/3/2021ಕ್ಕೆ 30 ವರ್ಷ ಮೀರಿರಬಾರದು.

ಎಸ್‌ಎಸ್‌ಎಲ್‌ಸಿ ನಂತರ ಎರಡು ವರ್ಷದ ಅವಧಿಯ ಐಟಿಐ ತರಬೇತಿ ಹೊಂದಿ, ಕುಶಲಕರ್ಮಿ ತರಬೇತಿ ಯೋಜನೆಯಡಿ ನಡೆಸುವ ವೃತ್ತಿ ಪರೀಕ್ಷೆಯ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ ತೇರ್ಗಡೆಯಾಗಿ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ, ರಾಜ್ಯ ವೃತ್ತಿ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಹರು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ಅವಧಿಯಲ್ಲಿ ಮಾಸಿಕ 7000 ರೂ. ಶಿಶಿಕ್ಷು ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು. ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ. ಅಂಗವಿಕಲರ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಅಭ್ಯರ್ಥಿಗಳ ಪೂರ್ವ ವಿವರವಿರುವ ಸ್ವಯಂ ಲಿಖಿತ ಅಥವ ಬೆರಳಚ್ಚು ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕು. ಅರ್ಜಿ ಕಳಿಸುವಾಗ ಲಕೋಟೆ ಮೇಲೆ 2021-22ನೇ ಸಾಲಿನ ಶಿಶಿಕ್ಷು ಆಯ್ಕೆಗೆ ಅರ್ಜಿ ಎಂದು ಸ್ಪಷ್ಟವಾಗಿ ಬರೆದಿರಬೇಕು.

ಅರ್ಜಿಗಳನ್ನು ಸಲ್ಲಿಸಲು ವಿಳಾಸ: ಅರ್ಜಿಗಳನ್ನು ನೇರವಾಗಿ ಅಥವ ಅಂಚೆ ಮೂಲಕ ಸಲ್ಲಿಕೆ ಮಾಡಲು ವಿಳಾಸ ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾ.ಸಂ.ಅ) ನಿಗಮ ಕಚೇರಿ ಗು.ವಿ.ಸ.ಕಂ.ನಿ, ಸ್ಟೇಷನ್ ರೋಡ್ ಕಲಬುರಗಿ 585102.

ಹೆಚ್ಚಿನ ಮಾಹಿತಿಗಾಗಿ ವಿಳಾಸ https://gescom.karnataka.gov.in/english

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+