ದಾವಣಗೆರೆ; ಕೆಲಸ ಖಾಲಿ ಇದೆ, ನವೆಂಬರ್ 10ರೊಳಗೆ ಅರ್ಜಿ ಹಾಕಿ

ದಾವಣಗೆರೆ, ಅಕ್ಟೋಬರ್ 27; ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅಪ್ರೆಂಟಿಸ್ ತರಬೇತಿ ಹಮ್ಮಿಕೊಂಡಿದೆ. ತರಬೇತಿಯ ಅವಧಿಯಲ್ಲಿ ಮಾಸಿಕ 15 ಸಾವಿರ ರೂ. ಸ್ಟೈಫಂಡ್ ನೀಡಲಾಗುತ್ತದೆ.

ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ನೀಡಲಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ.

ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಪ್ರತಿ ಅಭ್ಯರ್ಥಿಗೆ ಮಾಸಿಕ 15 ಸಾವಿರ ರೂ.ಗಳ ಸ್ಟೈಫೆಂಡ್ ನೀಡಲಾಗುವುದು.

Apply For Apprenticeship Training In Davanagere

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ, ಸುದ್ದಿ ಸಂಗ್ರಹ ಮತ್ತು ರಚನೆ ಕುರಿತಂತೆ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕದ ಕಾನೂನಾತ್ಮಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರಬೇಕು. ವಯೋಮಿತಿಯು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 35 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ.

ಇಲಾಖೆ ಈ ನಡೆಸಿದ ತರಬೇತಿಯಲ್ಲಿ ಪಾಲ್ಗೊಂಡವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ. ನಿಗದಿತ ಅವಧಿಯ ನಂತರ ಬಂದ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅಭ್ಯರ್ಥಿಗಳು ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರ, ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಮಾಡಲು ವಿಳಾಸ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದೇವರಾಜ ಅರಸ್ ಕಾಲೋನಿ, ದಾವಣಗೆರೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 08192-254892 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+