• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ; 15,000 ರೂ. ಸ್ಟೈಫಂಡ್

|

ಕೋಲಾರ, ಅಕ್ಟೋಬರ್ 22 : ಪತ್ರಿಕೋದ್ಯಮ ಪದವಿ ಪಡೆದ ಅಭ್ಯರ್ಥಿಗಳಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು 10 ತಿಂಗಳ ಅಪ್ರೆಂಟಿಸ್ ತರಬೇತಿ ಆಯೋಜಿಸಲಾಗಿದೆ. ಆಯ್ಕೆಯಾದ ಪ್ರತಿ ಅಭ್ಯರ್ಥಿಗೆ ಮಾಸಿಕ 15,000 ರೂ.ಗಳ ಸ್ಟೈಫಂಡ್ ನೀಡಲಾಗುತ್ತದೆ.

ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ ನೀಡುತ್ತಿದೆ. ಆಸಕ್ತರು ನವೆಂಬರ್ 10ರೊಳಗೆ ಅರ್ಜಿ ಹಾಕಬಹುದು.

ಪ.ಜಾ ಮತ್ತು ಪ.ಪಂಗಡದ ಅಭ್ಯರ್ಥಿಗಳ ಉದ್ಯೋಗಕ್ಕೆ ಆಸರೆಯಾದ 'ಆಶಾದೀಪ'

2020-21ನೇ ಸಾಲಿನಲ್ಲಿ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ

ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಕೋಲಾರ; ಖಾಸಗಿ ಕಂಪನಿಗಳಲ್ಲಿ 5000 ನೇಮಕಾತಿ

ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷ ಮೀರಿರಬಾರದು.

ಅಭ್ಯರ್ಥಿಗಳು ಅರ್ಜಿಯೊಂದಿಗೆ 10ನೇ ತರಗತಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಛೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನ್ಯಾಯಾಲಯಗಳ ಕಛೇರಿ ಸಂಕಿರಣ, ಕೋಲಾರ-563101 ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08152-222077.

English summary
Applications invited form Scheduled Caste (SC) and Scheduled Tribes (ST) candidates for the apprenticeship training in journalism. Candidates can apply till November 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X