• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಹಾಕಿ; 15,000 ರೂ. ಸ್ಟೈಫಂಡ್

|
Google Oneindia Kannada News

ಬೆಂಗಳೂರು, ಜನವರಿ 19; ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲು ಎರಡು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಳ್ಳಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 27ರೊಳಗೆ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ಎರಡು ತಿಂಗಳ ಅಪ್ರೆಂಟಿಸ್ ತರಬೇತಿ ನೀಡುತ್ತಿದೆ.

ಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿ

ವಿಶೇಷ ಘಟಕ ಯೋಜನೆ (ಪರಿಶಿಷ್ಟ ಜಾತಿ) 22 ಹಾಗೂ ಗಿರಿಜನ ಉಪಯೋಜನೆಯಡಿ (ಪರಿಶಿಷ್ಟ ಪಂಗಡ) 8 ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ತರಬೇತಿಗಾಗಿ ಆಯ್ಕೆ ಮಾಡಲಾಗುತ್ತದೆ.

4000 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ಒಪ್ಪಿಗೆ, ಜಿಲ್ಲಾವಾರು ಪಟ್ಟಿ 4000 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ಒಪ್ಪಿಗೆ, ಜಿಲ್ಲಾವಾರು ಪಟ್ಟಿ

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಮಾಸಿಕ 15,000 ರೂ.ಗಳ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು.

ವಿಜಯನಗರದಲ್ಲಿ ಕೆಲಸ ಖಾಲಿ ಇದೆ; ಜ.27ರ ತನಕ ಅರ್ಜಿ ಹಾಕಿವಿಜಯನಗರದಲ್ಲಿ ಕೆಲಸ ಖಾಲಿ ಇದೆ; ಜ.27ರ ತನಕ ಅರ್ಜಿ ಹಾಕಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.

ಅರ್ಜಿಯೊಂದಿಗೆ ಎಸ್ಎಸ್ಎಲ್‌ಸಿ ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ಮಾಡಿ
traineekma2022@gmail.com ವಿಳಾಸಕ್ಕೆ ಜನವರಿ 27ರೊಳಗೆ ತಲುಪುವಂತೆ ಕಳಿಸಬೇಕು.

ಅಭ್ಯರ್ಥಿಗಳು ಅಂಚೆ ಮೂಲಕವೂ ಅರ್ಜಿಗಳನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ವಿಳಾಸಕ್ಕೆ ಕಳುಹಿಸಬೇಕು.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ.

ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001, ದೂರವಾಣಿ 080-22860164ಕ್ಕೆ ಕರೆ ಮಾಡಬಹುದಾಗಿದೆ.

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ನೇಮಕಾತಿ; ಶಿವಮೊಗ್ಗ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ, ತೀರ್ಥಹಳ್ಳಿಯಲ್ಲಿ ಚಿಡುವ(ಮಿನಿ) ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಹುದ್ದೆ ಹಾಗೂ ಹಾರೇಕೊಪ್ಪ, ತಲ್ಲೂರಂಗಡಿ, ಲಕ್ಕುಂದ, ತಿಲಕಮಂಟಪ, ಬಾಂಡ್ಯ, ಮೇಗರವಳ್ಳಿ ಚೌಕ, ಶಿರಗಾರು, ಸಾಲ್ಗಡಿ, ಅಂಗಳಗೂಡಿಗೆ, ಆಗುಂಬೆ ರಸ್ತೆ ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿಯರ ಹುದ್ದೆ ಖಾಲಿ ಇವೆ.

ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು www.anganwadirecruit.kar.nic.in ವೆಬ್ ಸೈಟ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.

ಭದ್ರಾವತಿಯಲ್ಲಿಯೂ ಕೆಲಸ ಖಾಲಿ ಇದೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 19 ಸಹಾಯಕಿಯರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಭದ್ರಾವತಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಹಾವುಗೊಲ್ಲರ ಕ್ಯಾಂಪ್ ಮಿನಿ, ಚಿಕ್ಕಗೊಪ್ಪೆನಹಳ್ಳಿ, ಸಿಂಗನ ಮನೆ-2, ಹೊಸೂರು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ 4 ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಇವೆ.

ಅಂಗನವಾಡಿ ಕೇಂದ್ರಗಳಾದ ಸಿದ್ದರಹಳ್ಳಿ (ಪ.ಜಾ), ದೊಣಭಘಟ್ಟ 4, ಸಿಂಗನಮನೆ 2, ಶಾಂತಿನಗರ 1, ನಾಗಸಮುದ್ರ 1, ಸುರಗಿತೋಪು 1, ಮೂಫಾಕಾಂಪೌಂಡ್, ಸೀಗೆಬಾಗಿ 3, ಫಿಲ್ಟರ್ಶೆಡ್, ಹುತ್ತಾ ಕಾಲೋನಿ, ಅಶೋಕ್‍ನಗರ 2, ಅರದೊಟ್ಟಲು, ಎಂ. ಎಂ. ಕಾಂಪೌಡ್, ಅರಳೀಹಳ್ಳಿ-1, ನೆಹರು ನಗರ, ಸಣ್ಣಕುರುಬರ ಬೀದಿ, ಹಳೇಕೂಡ್ಲಿಗೆರೆ (ಪ.ಜಾತಿ) 19 ಅಂಗನವಾಡಿ ಸಹಾಯಕಿರಯರ ಹುದ್ದೆ ಇದೆ.

ಆಸಕ್ತರು ಆನ್‍ಲೈನ್ ಮೂಲಕ ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಫಲಕ ಹಾಗೂ ಕಚೇರಿಯ ವೇಳೆಯಲ್ಲಿ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು.

ಆಸಕ್ತರು ಅರ್ಜಿಗಳನ್ನು ಫೆಬ್ರವರಿ 13ರೊಳಗೆ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08181-295940 ಅನ್ನು ಸಂಪರ್ಕಿಸಬಹುದೆಂದು.

English summary
Karnataka Media Academy invited applications for apprenticeship training. Candidates can apply till January 27, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X