1638 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 08 : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 1638 ಹುದ್ದೆಗಳಿದ್ದು ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಫೆಬ್ರವರಿ 5, 2016.
www.ksp.gov.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಮೂಲಕ ಅಥವ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. [KSRTC ಯಲ್ಲಿ ಕೆಲಸ ಖಾಲಿ ಇದೆ]

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು. ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು. [ನೇಮಕಾತಿ ಆದೇಶ ಓದಿ]
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ/ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ದಿನಾಂಕ 5/2/2016ರೊಳಗೆ ಪ್ರಮಾಣ ಪತ್ರಗಳನ್ನು ಪಡೆದಿರಬೇಕು.
ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2 (ಬಿ), 3 (ಎ), 3 (ಬಿ) ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ.. ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಅಥವ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಶಾಖೆಗಳಲ್ಲಿ ಪಾವತಿ ಮಾಡಬೇಕು. ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಫೆಬ್ರವರಿ 6.












Click it and Unblock the Notifications