ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಮಾ. 7ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಮಾರ್ಚ್ 04; ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು 3 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ನ್ಯಾಯವಾದಿಗಳು ತಮ್ಮ ವೈಯುಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ಧಪಡಿಸಿ ಮಾರ್ಚ್ 7ರೊಳಗಾಗಿ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-221100/ 221010 ಅಥವಾ ನ್ಯಾಯಾಂಗ ಶಾಖೆಯನ್ನು ಖುದ್ದಾಗಿ ಸಂಪರ್ಕಿಸಬೇಕು.

ಐಎಎಸ್ ಹಾಗೂ ಕೆಎಎಸ್ ತರಬೇತಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ 2020-21ನೇ ಸಾಲಿನ ಕಲ್ಯಾಣ ಕರ್ನಾಟಕ ವಿಭಾಗದ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಐಎಎಸ್ ಮತ್ತು ಕೆಎಎಸ್ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಅರ್ಜಿಗಳನ್ನು ಸಲ್ಲಿಕೆ ಮಾಡಲು ಫೆಬ್ರವರಿ 28 ಕೊನೆಯ ದಿನವಾಗಿದ ಎಂದು ತಿಳಿಸಲಾಗಿತ್ತು. ಈಗ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾರ್ಚ್ 10ರ ಸಂಜೆ 5.30ರ ತನಕ ವಿಸ್ತರಿಸಲಾಗಿದೆ ಎಂದು ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿ ಸಂಘ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಸಂಘದ www.kkhracs.com ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಮಾರ್ಚ್ 10ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಇಂದು ನೇರ ಸಂದರ್ಶನ; ಐಸಿಐಸಿಐ ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜ ಹಿಂಭಾಗದಲ್ಲಿರುವ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 4 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಿದೆ.
ನೇರ ಸಂದರ್ಶನಕ್ಕೆ ಹಾಜರಾಗಲು ವಯೋಮಿತಿ 26 ವರ್ಷಗಳು. ಯಾವುದೇ ಪದವೀಧರರು ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಬಿಇ, ಎಂಬಿಎ ಅಭ್ಯರ್ಥಿಗಳು ಅರ್ಹರಲ್ಲ. ಹೆಚ್ಚಿನ ಮಾಹಿತಿಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ, ದೂರವಾಣಿ ಸಂಖ್ಯೆ 08472-274846.
ಅವಧಿ ವಿಸ್ತರಣೆ; ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ 2020-21ನೇ ಸಾಲಿನ ಕಲ್ಯಾಣ ಕರ್ನಾಟಕ ವಿಭಾಗದ ವ್ಯಾಪ್ತಿಯ ಯುವಕ, ಯುವತಿಯರಿಗೆ ಸೈನಿಕ ಮತ್ತು ಅರೆ-ಸೈನಿಕ ಬಲದ ಪೂರ್ವಭಾವಿ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಕರೆದಿತ್ತು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾರ್ಚ್ 10ರ ಸಂಜೆ 5.30 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಆಸಕ್ತರು ಸಂಘದ www.kkhracs.com ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು ಫೆಬ್ರವರಿ 28 ಆಗಿತ್ತು.
ಕೊಡಗಿನಲ್ಲಿ ಕೆಲಸ ಖಾಲಿ ಇದೆ; ಮಡಿಕೇರಿ ತಾಲ್ಲೂಕಿನ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 4 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ.
ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. 18 ರಿಂದ 35 ವರ್ಷ ವಯೋಮಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ www.anganwadirecruit.kar.nic.in ನಲ್ಲಿ ಅರ್ಜಿ ಭರ್ತಿ ಮಾಡಬಹುದಾಗಿದೆ. ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೆ ಯಾವುದೇ ರೂಪದ ಅರ್ಜಿಯನ್ನು ಪರಿಗಣಿಸುವುದಿಲ್ಲ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಖಾಲಿ ಇರುವ ಕೇಂದ್ರಗಳು ಎಡಪಾಲ-1, ಕೊಯನಾಡು-1, ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇರುವ ಕೇಂದ್ರಗಳು ಕಿಕ್ಕರೆ, ಬಲ್ಲಮಾವಟಿ ಟೌನ್, ಹೆರವನಾಡು ಶಾಲೆ ಮತ್ತು ಕುಯ್ಯಂಗೇರಿ.












Click it and Unblock the Notifications