ಚಿತ್ರದುರ್ಗದಲ್ಲಿ ಸಹ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 04; ಚಿತ್ರದುರ್ಗ ಜಿಲ್ಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 5ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯವರ, ಚಿತ್ರದುರ್ಗದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಸಹ ಶಿಕ್ಷಕ ಹುದ್ದೆಗೆ ಅರ್ಜಿ ಕರೆಯಲಾಗಿದೆ.

Apply For Assistant Teacher Jobs At Chitradurga

ಅರ್ಜಿಗಳನ್ನು ಸಲ್ಲಿಕೆ ಮಾಡುವವರು ಬಿಎ, ಬಿ.ಇಡಿ. ವಿದ್ಯಾರ್ಹತೆ ಹೊಂದಿರಬೇಕು. ಮಾಜಿ ಸೈನಿಕ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಮೇ 5ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅರ್ಜಿ ಸಲ್ಲಿಕೆ ಮಾಡುವವರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08182-220925 ಅನ್ನು ಸಂಪರ್ಕಿಸುವುದು.

ಅರ್ಜಿ ಆಹ್ವಾನ; ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ರೂಡ್‍ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ/ ಯುವತಿಯರಿಗಾಗಿ ಮೇ 15 ರಿಂದ 13 ದಿನಗಳ ಸಿಸಿಟಿವಿ ಕ್ಯಾಮೆರಾ ದುರಸ್ತಿ ಮತ್ತು ಜೂನ್ ತಿಂಗಳಲ್ಲಿ ಮಹಿಳೆಯರಿಗಾಗಿ ಹೊಲಿಗೆ ತರಬೇತಿ ಹಾಗೂ ಸಮಗ್ರ ಕೃಷಿ ಉದ್ಯಮಿ ಉಚಿತ ತರಬೇತಿಗಳು ಪ್ರಾರಂಭವಾಗಲಿವೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಮೇ 10 ಕೊನೆಯ ದಿನವಾಗಿದೆ. ಈ ತರಬೇತಿಗಳು ಸ್ವ ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಆಗಲಿದೆ. ತರಬೇತಿ ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.

ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕ್‍ನಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಮಾಹಿತಿಗಳನ್ನು ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವರು ಹೆಚ್ಚಿನ ಮಾಹಿತಿಗಾಗಿ 9482188780, 9483485489, 8970145354 ಸಂಖ್ಯೆಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+