ಕೋಲಾರ; ಗುತ್ತಿಗೆ ವೈದ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೋಲಾರ, ನವೆಂಬರ್ 08 : ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಒಂದು ವಾರಗಳ ಕಾಲ ಅರ್ಜಿ ಸಲ್ಲಿಸಲು ಅವಕಾಶವಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ಕರ್ತವ್ಯ ವೈದ್ಯರ ಎದುರು ಹುದ್ದೆಯಲ್ಲಿ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಎಂ. ಬಿ. ಬಿ. ಎಸ್ ವೈದ್ಯರು ಈ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದು.
ಗುಟ್ಟಹಳ್ಳಿ, ಕೆ. ಜಿ. ಎಫ್. ತಾಲೂಕು, ಕೂರಿಗೇಪಲ್ಲಿ, ಶ್ರೀನಿವಾಸಪುರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಎದುರು ತಲಾ ಒಂದು ಹುದ್ದೆಗೆ ಎಂ. ಬಿ. ಬಿ. ಎಸ್ ಅಥವಾ ಆಯುಷ್ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಎಂ. ಬಿ. ಬಿ. ಎಸ್ ಅಥವಾ ಆಯುಷ್ ಗುತ್ತಿಗೆ ವೈದ್ಯರ ನೇಮಕಾತಿ ತಾತ್ಕಾಲಿಕವಾಗಿದೆ. ರೋಸ್ಟರ್ ಮತ್ತು ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಹ ಎಂ. ಬಿ. ಬಿ. ಎಸ್ ಮತ್ತು ಆಯುಷ್ ವೈದ್ಯ ಅಭ್ಯರ್ಥಿಗಳು ತಮ್ಮ ಸ್ವ ವಿವರ ಮತ್ತು ದಾಖಲೆಗಳನ್ನು ಒಂದು ವಾರದೊಳಗಾಗಿ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಅರ್ಜಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೋಲಾರ ಇಲ್ಲಿಗೆ ಸಲ್ಲಿಸಬಹುದಾಗಿದೆ.












Click it and Unblock the Notifications