ಗದಗದಲ್ಲಿ ಕೆಲಸ ಖಾಲಿ ಇದೆ; ಜೂನ್ 30ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಜೂನ್ 16 : ಗದಗದಲ್ಲಿ 6 ಬಿ. ಎಫ್. ಟಿ. ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಜೂನ್ 30ರೊಳಗೆ ಅರ್ಜಿ ಹಾಕಬಹುದಾಗಿದೆ.
Recommended Video
ಗದಗ ಜಿಲ್ಲಾ ಪಂಚಾಯತ್ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ( ನರೇಗಾ) ಯೋಜನೆಯಡಿ ಗದಗ ಜಿಲ್ಲೆಗೆ ಮಂಜೂರಾಗಿರುವ 6 ಬಿ.ಎಫ್.ಟಿ. ಹುದ್ದೆ ಭರ್ತಿ ಮಾಡುತ್ತಿದೆ.
ಅರ್ಹ ಅಭ್ಯರ್ಥಿಗಳು ಗದಗ ಜಿಲ್ಲಾ ಪಂಚಾಯತ್ ಕಚೇರಿಯಿಂದ ಅರ್ಜಿ ಪಡೆದು 30-6-2020 ರೊಳಗೆ ಸಲ್ಲಿಸಬಹುದಾಗಿದೆ. ನರೇಗಾ ಯೋಜನೆಯಡಿ ನೇಮಕವಾಗುವ ಬಿ. ಎಫ್. ಟಿ ಹುದ್ದೆಯು ತಾತ್ಕಾಲಿಕ ಹುದ್ದೆಯಾಗಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಜಿ ಸಲ್ಲಿಸುವವರು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಅಂದರೆ ಸದರಿ ವ್ಯಕ್ತಿಯು ಹಿಂದಿನ 3 ವರ್ಷಗಳಲ್ಲಿ ಕನಿಷ್ಟ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಕಾರರಾಗಿ ಕೆಲಸ ಮಾಡಿರಬೇಕು.
ಅಭ್ಯರ್ಥಿಯು ಕನಿಷ್ಟ 10ನೇ ತರಗತಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮಹಿಳೆಯರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಾಕಷ್ಟು ಪ್ರಾಧಾನ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿ 45 ವರ್ಷಕ್ಕಿಂತ ಕಡಿಮೆ ಇರಬಾರದು. ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲಾ ಪಂಚಾಯತ್ ಕಚೇರಿಯ ನರೇಗಾ ಶಾಖೆಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08372-235947.












Click it and Unblock the Notifications